ಕಾರ್ಕಳ: ಕುದುರೆಮುಖ–ಮಾಳ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರು ಎಚ್ಚರಿಕೆಯಿಂದ ಪ್ರಯಾಣಿಸುವಂತೆ ಮನವಿ ಮಾಡಲಾಗಿದೆ. ಮಾಳ ಸಮೀಪ ರಸ್ತೆಯ ಮೇಲೆ ವಾಹನವೊಂದರಿಂದ ಆಯಿಲ್ ಸೋರಿಕೆಯಾಗಿರುವ ಕಾರಣ ಹಲವು ವಾಹನಗಳು ನಿಯಂತ್ರಣ ತಪ್ಪಿ ಸರಣಿ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ರಸ್ತೆಯ ಮೇಲೆ ಆಯಿಲ್ ಹರಡಿರುವುದರಿಂದ ವಾಹನ ನಿಯಂತ್ರಣ ತಪ್ಪುವ ಸಾಧ್ಯತೆ ಹೆಚ್ಚಿರುವ ಹಿನ್ನೆಲೆಯಲ್ಲಿ, ಆ ಮಾರ್ಗದಲ್ಲಿ ಸಂಚರಿಸುವವರು ವೇಗವನ್ನು ನಿಯಂತ್ರಿಸಿ, ಸುರಕ್ಷಿತ ಅಂತರ ಕಾಯ್ದುಕೊಂಡು, ಅಗತ್ಯ ಮುನ್ನೆಚ್ಚರಿಕೆ ವಹಿಸಿ ವಾಹನ ಚಲಾಯಿಸುವಂತೆ ಸೂಚಿಸಲಾಗಿದೆ.ಘಟನೆಯಲ್ಲಿ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ, ಅಪಘಾತದ ಸ್ಥಳದಲ್ಲಿ ಸಂಚಾರ ನಿಧಾನಗತಿಯಲ್ಲಿ ಸಾಗುತ್ತಿದ್ದು, ಪರಿಸ್ಥಿತಿ ಸಹಜವಾಗುವವರೆಗೆ ವಾಹನ ಸವಾರರು ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಮನವಿ ಮಾಡಲಾಗಿದೆ.
