
ಚಿಕ್ಕಮಗಳೂರು: ಶೃಂಗೇರಿ ಪಟ್ಟಣದ ಗಾಂಧಿ ಮೈದಾನದ ಬಳಿ ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಬೆಂಗಳೂರು ಮೂಲದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ನಡೆದಿದೆ. ಮೃತನನ್ನು 22 ವರ್ಷದ ದರ್ಶನ್ ಎಂದು ಗುರುತಿಸಲಾಗಿದೆ. ನಾಲ್ವರು ಸ್ನಾನಕ್ಕೆಂದು ತುಂಗಾ ನದಿಗೆ ಇಳಿದಿದ್ದು, ನದಿಯ ಆಳದ ಬಗ್ಗೆ ಅರಿವಿಲ್ಲದ ಕಾರಣ ದರ್ಶನ್ ನೀರಿನಲ್ಲಿ ಸಿಲುಕಿ ಮುಳುಗಿದ್ದಾರೆ ಎನ್ನಲಾಗಿದೆ. ಉಳಿದ ಮೂವರು ಸುರಕ್ಷಿತವಾಗಿ ದಡಕ್ಕೆ ವಾಪಸ್ ಬಂದಿದ್ದಾರೆ. ಘಟನೆಯ ಮಾಹಿತಿ ತಿಳಿದು ಶೃಂಗೇರಿ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ದರ್ಶನ್ಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಶೃಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ವರದಿ: ಸಂತೋಷ್ ಅತ್ತಿಗೆರೆ




