ಬೆಂಗಳೂರು: ಕಳೆದ ನಾಲ್ಕು ವರ್ಷಗಳಿಂದ ಬಾಕಿ ಉಳಿದಿದ್ದ ಸಾರಿಗೆ ನೌಕರರ ವೇತನ ಹಿಂಬಾಕಿ ಪಾವತಿಗೆ ರಾಜ್ಯ ಸರ್ಕಾರ ಮತ್ತೊಂದು ಕಂತಿನ ಅನುದಾನ ಬಿಡುಗಡೆ ಮಾಡಿದೆ. ಮುಖ್ಯಮಂತ್ರಿ ವಿಶೇಷ ಅನುದಾನದಡಿ ಸಾರಿಗೆ ನಿಗಮಗಳಿಗೆ 280 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ ಎಂದು ಸಾರಿಗೆ ಸಚಿವ ಭೈರತಿ ಸುರೇಶ್ ತಿಳಿಸಿದ್ದಾರೆ. ಸಾರಿಗೆ ನೌಕರರಿಗೆ ಸರ್ಕಾರ ಒಟ್ಟು 1,271 ಕೋಟಿ ರೂಪಾಯಿ ವೇತನ ಹಿಂಬಾಕಿ ಪಾವತಿಸಬೇಕಿದ್ದು, ಈ ಪೈಕಿ ಮೊದಲ ಕಂತಿನಲ್ಲಿ 450 ಕೋಟಿ ರೂಪಾಯಿ ಹಾಗೂ ಎರಡನೇ ಕಂತಿನಲ್ಲಿ 170 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿತ್ತು. ಇದೀಗ ಮೂರನೇ ಹಂತದಲ್ಲಿ 280 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದ್ದು, ಒಟ್ಟು 900 ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಿದೆ. ಉಳಿದ 371 ಕೋಟಿ ರೂಪಾಯಿ ವೇತನ ಹಿಂಬಾಕಿ ಪಾವತಿಸಬೇಕಿದೆ. ಅನುದಾನ ಬಿಡುಗಡೆ ಮಾಡಿದ ಮುಖ್ಯಮಂತ್ರಿ ಅವರಿಗೆ ಸಾರಿಗೆ ಸಚಿವ ಭೈರತಿ ಸುರೇಶ್ ಧನ್ಯವಾದ ತಿಳಿಸಿದ್ದಾರೆ.
