
ಕೊಳ್ಳೇಗಾಲ: ದಿ ರಾಕ್ ಫಿಟ್ನೆಸ್ ಕೊಳ್ಳೇಗಾಲ ಹಾಗೂ ಬಿಆರ್ಟಿ ಹುಲಿ ಸಂರಕ್ಷಿತ ಪ್ರದೇಶದ ಚಾಮರಾಜನಗರ ವನ್ಯಜೀವಿ ವಲಯ ಕೊಳ್ಳೇಗಾಲ ವತಿಯಿಂದ ಮದುವನಹಳ್ಳಿ ಸಮೀಪದ ಸಿದ್ದೇಶ್ವರ ಬೆಟ್ಟದಲ್ಲಿ ಪ್ಲಾಸ್ಟಿಕ್ ಸ್ವಚ್ಛತಾ ಹಾಗೂ ಜಾಗೃತಿ ಕಾರ್ಯಕ್ರಮ ನಡೆಸಲಾಯಿತು. ಸಿದ್ದೇಶ್ವರ ಬೆಟ್ಟದ ದೇವಸ್ಥಾನದ ಸುತ್ತಮುತ್ತ ಹಾಗೂ ಮೆಟ್ಟಿಲು ದಾರಿಯಲ್ಲಿ ಪ್ರವೇಶದ್ವಾರದವರೆಗೆ ಬಿದ್ದಿದ್ದ ಪ್ಲಾಸ್ಟಿಕ್ ತ್ಯಾಜ್ಯವನ್ನು ಸಂಗ್ರಹಿಸಿ ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡಲಾಯಿತು. ಕಾರ್ಯಕ್ರಮದ ಮೂಲಕ ಸಾರ್ವಜನಿಕರಲ್ಲಿ ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡುವಂತೆ ಹಾಗೂ ಪ್ರವಾಸಿ ಮತ್ತು ಧಾರ್ಮಿಕ ಸ್ಥಳಗಳ ಸ್ವಚ್ಛತೆ ಕಾಪಾಡುವಂತೆ ಜಾಗೃತಿ ಮೂಡಿಸಲಾಯಿತು. ಈ ಸಂದರ್ಭದಲ್ಲಿ ಹೇಮಂತ್, ಪ್ರವೀಣ್, ಸುದರ್ಶನ್, ಕಿರಣ್, ರಂಗಸ್ವಾಮಿ, ವಿಸ್ಮಿತಾ, ಅರಣ್ಯ ವೀಕ್ಷಕ ಆಕಾಶ್ ಸೋಪಾನ ಜೋಷಿ, ಸಿದ್ದಲಿಂಗೇಗೌಡ, ವೀರತಪ್ಪ, ಮಹದೇವ್ ಹಾಗೂ ಉಪವಲಯ ಅರಣ್ಯಾಧಿಕಾರಿ ಬಿ. ಅನಂತರಾಮು ಸೇರಿದಂತೆ ಹಲವರು ಭಾಗವಹಿಸಿದ್ದರು.




