
ದೇಶದ ಯುವಜನತೆಯ ಭವಿಷ್ಯಕ್ಕಿಂತ ಪ್ರಮುಖವಾದದ್ದು ಯಾವುದೂ ಕೂಡ ಇಲ್ಲ, ನೀಟ್ ಪರೀಕ್ಷೆ ಅಕ್ರಮ ಎಸಗಿದ ಹಾಗೂ ಪ್ರಶ್ನೆಪತ್ರಿಕೆ ಸೋರಿಕೆಯಲ್ಲಿ ಭಾಗಿಯಾದ ವ್ಯಕ್ತಿಗಳನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮೂಲಕ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದು, ಪ್ರಮುಖ ಪ್ರಕರಣದ ಶೀಘ್ರ ವಿಚಾರಣೆ ನಡೆಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಲು ಫಾಸ್ಟ್ ಟ್ರ್ಯಾಕ್ ಕೋರ್ಟ್ ಸ್ಥಾಪಿಸಲಾಗುವುದು ಹಾಗೂ ಅಗತ್ಯ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.




