ಅಯೋಧ್ಯೆ: ಪ್ರಧಾನಿ ನರೇಂದ್ರ ಮೋದಿ ಇಂದು ಅಯೋಧ್ಯೆಯ ರಾಮ ಮಂದಿರದ ಶಿಖರದಲ್ಲಿ ಅಭಿಜಿತ್ ಮುಹೂರ್ತದಲ್ಲಿ ಕೇಸರಿ ಧ್ವಜಾರೋಹಣ ನೆರವೇರಿಸಿದರು. ದೆಹಲಿಯಿಂದ ಅಯೋಧ್ಯೆಗೆ ಆಗಮಿಸಿ, ಶೇಷಾವತಾರ ಮಂದಿರ ಮತ್ತು ಸಪ್ತ ಮಂದಿರಗಳಲ್ಲಿ ಪೂಜೆ ಸಲ್ಲಿಸಿದ ನಂತರ ಅವರು ರೋಡ್ ಶೋ ಮೂಲಕ ರಾಮ ಮಂದಿರ ತಲುಪಿದರು. ಕಟ್ಟುನಿಟ್ಟಿನ ಭದ್ರತೆಯ ನಡುವೆ QR ಕೋಡ್ ಹೊಂದಿದ ಆಹ್ವಾನಿತ ಅತಿಥಿಗಳಿಗೆ ಮಾತ್ರ ಪ್ರವೇಶ ಕಲ್ಪಿಸಲಾಯಿತು. ನಂತರ ಪ್ರಧಾನಿ ಮೋದಿ ಮತ್ತು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೊಸದಾಗಿ ನಿರ್ಮಿಸಲಾದ ಮೊದಲ ಮಹಡಿಯ ರಾಮ ದರ್ಬಾರ್ನಲ್ಲಿ ವಿಶೇಷ ಪೂಜೆ ನೆರವೇರಿಸಿದರು.
