
ಬಾಳೆಹೊನ್ನೂರು: 66/33/11 ಕೆ.ವಿ. ವಿದ್ಯುತ್ ಕೇಂದ್ರ ಬಾಳೆಹೊನ್ನೂರು ಹಾಗೂ 66/11 ಕೆ.ವಿ. ವಿದ್ಯುತ್ ಕೇಂದ್ರ ಜೇನುಗದ್ದೆಯಲ್ಲಿ 2026-27ನೇ ಸಾಲಿನ ದ್ವಿತೀಯ ತ್ರೈಮಾಸಿಕ ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳಲಾಗುತ್ತಿತ್ತಿದ್ದು, ಈ ಹಿನ್ನೆಲೆಯಲ್ಲಿ ಬುಧವಾರ ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. 66/33/11 ಕೆ.ವಿ. ವಿದ್ಯುತ್ ಕೇಂದ್ರ ಬಾಳೆಹೊನ್ನೂರು ವ್ಯಾಪ್ತಿಯ ಬಾಳೆಹೊನ್ನೂರು, ಕಳಸ, ಶೃಂಗೇರಿ, ಜಯಪುರ, ಕುಂಚೆಬೈಲು, ಬಸ್ರಿಕಟ್ಟೆ, ಮಾಗುಂಡಿ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ಸ್ಥಗಿತಗೊಳ್ಳಲಿದೆ. ಅಲ್ಲದೆ 66/11 ಕೆ.ವಿ. ವಿದ್ಯುತ್ ಕೇಂದ್ರ ಜೇನುಗದ್ದೆ ವ್ಯಾಪ್ತಿಯ ಕಡಬಗೆರೆ, ಸಿದ್ದಾಪುರ, ಬೋಗಸೆ, ಜೇನುಗದ್ದೆ, ಕಣತಿ, ಕಸ್ತೆಮನೆ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿಯೂ ಇದೇ ಅವಧಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ನಿರ್ವಹಣಾ ಕಾಮಗಾರಿಯಿಂದಾಗಿ ಉಂಟಾಗುವ ತಾತ್ಕಾಲಿಕ ವಿದ್ಯುತ್ ವ್ಯತ್ಯಯಕ್ಕೆ ಸಾರ್ವಜನಿಕರು ಸಹಕರಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.




