
ಬಾಳೆಹೊನ್ನೂರು: ಮಂಗಳೂರು ವಿದ್ಯುಚ್ಛಕ್ತಿ ಸರಬರಾಜು ಕಂಪನಿ ನಿಯಮಿತ (ಮೆಸ್ಕಾಂ) ವತಿಯಿಂದ 2026-27ನೇ ಸಾಲಿನ ಮೊದಲ ತ್ರೈಮಾಸಿಕ ನಿರ್ವಹಣಾ ಹಾಗೂ ಮೂಲಸೌಕರ್ಯ ನಿರ್ಮಾಣ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದ್ದು, ಇದರ ಹಿನ್ನೆಲೆ ಮೇ 22 ಶುಕ್ರವಾರ ಬೆಳಿಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. 66/33/11 ಕೆವಿ ಬಾಳೆಹೊನ್ನೂರು ಡಿ.ವಿ ಶೆಂಡಳ್ಳಿ ಮಾರ್ಗದಲ್ಲಿ ನಡೆಯುವ ಕಾಮಗಾರಿಯ ಪರಿಣಾಮವಾಗಿ ಬಾಳೆಹೊನ್ನೂರು, ಶೃಂಗೇರಿ ಹಾಗೂ ಜಯಪುರ ವಿದ್ಯುತ್ ವಿತರಣಾ ಕೇಂದ್ರಗಳಿಂದ ಹೊರಹೊಮ್ಮುವ ಎಲ್ಲಾ ನಗರ ಮತ್ತು ಗ್ರಾಮೀಣ ಫೀಡರ್ಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳ್ಳಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮನವಿ ಮಾಡಲಾಗಿದೆ.




