ಬೆಂಗಳೂರು: ಮನೆ ಕೆಲಸದ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಪು ಪ್ರಶ್ನಿಸಿ ಪ್ರಜ್ವಲ್ ಸಲ್ಲಿಸಿದ್ದ ಮೇಲ್ಮನವಿಯ ಅರ್ಜಿ ವಿಚಾರಣೆಯಲ್ಲಿ ವಾದ-ಪ್ರತಿವಾದ ಆಲಿಸಿದ ಬಳಿಕ ನ್ಯಾಯಧೀಶರು ಜಾಮೀನು ಅರ್ಜಿಯನ್ನು ವಜಾಗೊಳಿಸಿದರು. ಪ್ರಜ್ವಲ್ ವಿಚಾರಣಾಧೀನ ನ್ಯಾಯಾಲಯದಲ್ಲಿ ಅಶ್ಲೀಲ ವಿಡೀಯೊಗಳ ನಿರ್ಬಂಧಕ್ಕೆ ಆದೇಶ ಪಡೆದಿದ್ದರು. ಹಾಸನದಲ್ಲಿ ಚುನಾವಣಾ ಏಜೆಂಟ್ ಕೂಡ ದೂರು ನೀಡಿದ್ದು, ಮಾಜಿ ಕಾರ್ ಡ್ರೈವರ್ ವಿರುದ್ಧ ದೂರು ದಾಖಲಾಗಿದ್ದರು, ಅದರ ಬಗ್ಗೆ ಯಾವುದೇ ವಿಚಾರಣೆ ನಡೆದಿಲ್ಲ ಎಂದು ಪ್ರಜ್ವಲ್ ಪರ ವಕೀಲರು ವಾದ ಮಾಡಿದರೂ, ಪ್ರಜ್ವಲ್ ಅವರ ಜಾಮೀನು ಆಸೆಗೆ ಮತ್ತೆ ಹೈಕೋರ್ಟ್ ತಣ್ಣೀರೆರೆಚಿದೆ.
