
ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ನಡೆದ ಸಾರ್ವಜನಿಕ ಹಿಂದೂ ಮಹಾಸಭಾ ಆಯೋಜಿಸಿದ್ದ ಗಣಪತಿ ಲಾಂಛನ ಬಿಡುಗಡೆ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮ ಪ್ರಮೋದ್ ಮುತಾಲಿಕ್ ಅವರೊಂದಿಗೆ ವೇದಿಕೆಯನ್ನು ಹಂಚಿಕೊಂಡರು. ಈ ಸಂದರ್ಭದಲ್ಲಿ ಅವರು ತೆರೆದ ಜೀಪಿನಲ್ಲಿ ಮೂಡಿಗೆರೆ ಪಟ್ಟಣದಲ್ಲಿ ಮುತಾಲಿಕ್ ಜೊತೆ ಮೆರವಣಿಗೆಯಲ್ಲಿ ಭಾಗಿಯಾಗಿದ್ದು, ನಂತರ ಅಡಂತ್ಯಾಯ ಮಂಟಪದಲ್ಲಿ ನಡೆದ ಸಭೆಯಲ್ಲಿ “ನಾನು ಇಲ್ಲಿಗೆ ಹಿಂದೂವಾಗಿ ಬಂದಿದ್ದೇನೆ, ಇದಕ್ಕೆ ಬೇರೆ ಬಣ್ಣ ಕೊಡಬೇಡಿ, ಯಾರೂ ತಪ್ಪಾಗಿ ಅರ್ಥಮಾಡಿಕೊಳ್ಳಬೇಡಿ” ಎಂದು ಸ್ಪಷ್ಟಪಡಿಸಿದರು.