
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ದಿನಾಂಕ 26-07-2022 ರ ರಾತ್ರಿ ತಮ್ಮ ಅಂಗಡಿ ಬಳಿ ಪ್ರವೀಣ್ ನೆಟ್ಟಾರ್ ಅವರನ್ನು ಬೈಕ್ನಲ್ಲಿ ಬಂದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈಯಲಾಗಿತ್ತು. ಅಬ್ದುಲ್ ರೆಹಮಾನ್ ಎರಡು ವರ್ಷಗಳಿಂದ ತಲೆಮರಿಸಿಕೊಂಡಿದ್ದ. ಆತನ ಬಗ್ಗೆ ಮಾಹಿತಿ ನೀಡಿದವರಿಗೆ ಎನ್ಐಎ 4 ಲಕ್ಷ ರೂಪಾಯಿ ಬಹುಮಾನವನ್ನು ನೀಡುವುದಾಗಿ ಘೋಷಿಸಿತ್ತು. ಆರೋಪಿಯು ಕತಾರ್ನಿಂದ ಕಣ್ಣೂರು ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಿದಂತೆ ಎನ್ಐಎ ಅಧಿಕಾರಿಗಳು ಆತನನ್ನು ಬಂಧಿಸಿದ್ದಾರೆ. ಪಿಎಫ್ಐ ನಾಯಕರ ನಿರ್ದೇಶನದಂತೆ ಅಬ್ದುಲ್ ರೆಹಮಾನ್ ದಾಳಿಕೋರರಿಗೆ ಆಶ್ರಯ ನೀಡಿದ್ದ ಎಂದು ತಿಳಿದು ಬಂದಿದೆ. ಹಾಗೆಯೇ ಅಬ್ದುಲ್ ರೆಹಮಾನ್ ಸೇರಿದಂತೆ ತಲೆಮರಿಸಿಕೊಂಡಿರುವ 4 ಆರೋಪಿಗಳ ವಿದುದ್ಧ ಎನ್ಐಎ ಚಾರ್ಜ್ಶೀಟ್ ಸಲ್ಲಿಸಿತ್ತು. ಈ ಮೂಲಕ ಒಟ್ಟು 28 ಜನರ ವಿರುದ್ಧ ಚಾರ್ಜ್ಶೀಟ್ ಸಲ್ಲಿಸಲಾಗಿತ್ತು.
ನಾಪತ್ತೆಯಾಗಿರುವ ಅಬ್ದುಲ್ ರೆಹಮಾನ್ ವಿದೇಶಕ್ಕೆ ಪರಾರಿಯಾಗಲು ಹಾಗೂ ರಿಯಾಜ್ ಎಂಬಾತ ಪೈಚಾರ್ಗೆ ಆಶ್ರಯ ಒದಗಿಸುವ ಬಗ್ಗೆ ಅತೀಕ್ ಹಾಗೂ ಕಲಾಂದರ್ಗೆ ಮಾರ್ಗದರ್ಶನ ನೀಡಿದ್ದ ಎಂದು ಎನ್ಐಎ ಹೇಳಿತ್ತು. ಚಾರ್ಜ್ಶೀಟ್ನಲ್ಲಿ ಉಲ್ಲೇಖಿಸಿರುವಂತೆ, ಹತ್ಯೆ ಬಳಿಕ ಪರಾರಿಯಾಗಲು ಪ್ರಮುಖ ಆರೋಪಿ ಮುಸ್ತಾಫ ಪೈಚಾರ್ಗೆ ಬಂಧಿತರಾದ ಅತೀಕ್ ಸದ್ಯ ಮೃತನಾಗಿರುವ ಕಲಾಂದರ್ ಚೆನ್ನೈನಲ್ಲಿ ೨೦೨೨ ರಿಂದ ೨೦೨೩ರ ವರೆಗೆ ಆಶ್ರಯ ಪಡೆದುಕೊಂಡಿದ್ದರು ಎಂದು ಚಾರ್ಜಶೀಟ್ನಲ್ಲಿ ಉಲ್ಲೇಖಿಸಿರುತ್ತದೆ. ಸದ್ಯ ತನಿಖೆ ಮುಂದುವರಿದಿದೆ.