ಮಂಡ್ಯ: ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರವರಿ 23ರಂದು ರಾಜ್ಯ ಪ್ರವಾಸ ಕೈಗೊಳ್ಳಲಿದ್ದು, ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿರುವ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಲಿದ್ದಾರೆ. ಈ ವೇಳೆ ನಿರ್ಮಾಲನಂದ ಶ್ರೀಗಳ ಪಟ್ಟಾಭಿಷೇಕ ಹಾಗೂ ಬಾಲಗಂಗಾಧರನಾಥ ಶ್ರೀಗಳ ಐಕ್ಯ ಸ್ಥಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಲಿದ್ದು, ಬೆಂಗಳೂರಿನ ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಬಳಿಕ ವಿಶೇಷ ವಿಮಾನದ ಮೂಲಕ ಮಂಡ್ಯಕ್ಕೆ ತೆರಳಲಿರುವ ಪ್ರಧಾನಿ ಮೋದಿ ಅವರ ಈ ಧಾರ್ಮಿಕ ಭೇಟಿ ರಾಜ್ಯದಲ್ಲಿ ಗಮನ ಸೆಳೆದಿದೆ.
