
ಬೆಂಗಳೂರು: ರಾಜ್ಯಾದ್ಯಂತ ಕಾವೇರಿ ನೀರಿನ ಕಿಚ್ಚು ಕಾಡ್ಗಿಚ್ಚಿನಂತೆ ಹೊತ್ತಿಕೊಂಡಿದ್ದು, ಕರ್ನಾಟಕದಲ್ಲಿ ಮಳೆ ಇಲ್ಲದೇ ರೈತರು ಪರದಾಡುತಿದ್ದು, ಈ ಸಂದರ್ಭದಲ್ಲಿ ಗಾಯದ ಮೇಲೆ ಬರೆ ಎಳೆದಂತೆ ಕಾವೇರಿ ನೀರನ್ನು ತಮಿಳುನಾಡಿಗೆ ಬಿಡುವಂತೆ ರಾಜ್ಯಕ್ಕೆ ಸೂಚನೆ ನೀಡಿದ್ದು, CWMA ಆದೇಶದಿಂದಾಗಿ ರೈತರು ಮತ್ತು ಕನ್ನಡ ಪರ ಸಂಘಟನೆಗಳು ರೊಚ್ಚಿಗೆದ್ದು ಆಕ್ರೋಶ ಹೊರಹಾಕಿದ್ದಾರೆ. ಕಾವೇರಿ ಹೋರಾಟ ತೀವ್ರಗೊಳಿಸಲು ಕರ್ನಾಟಕ ಬಂದ್ಗೆ ಕರೆ ಕೊಡುವ ಸಾಧ್ಯತೆ ಹೆಚ್ಚಿದೆ ಎಂದು ಮಾಹಿತಿ ಲಭ್ಯವಾಗಿದೆ.



