
ಚಿಕ್ಕಮಗಳೂರು: ಜಿಲ್ಲೆಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ರಫ್ತು ವಹಿವಾಟಿಗೆ ಉತ್ತೇಜನ ನೀಡುವ ಉದ್ದೇಶದಿಂದ ಕೃಷಿ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣಾ ಮತ್ತು ರಫ್ತು ನಿಗಮದ (KAPPEC) ವತಿಯಿಂದ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿದೆ. ರಫ್ತು ಸಾಮರ್ಥ್ಯವಿರುವ ಕೃಷಿ, ತೋಟಗಾರಿಕೆ ಹಾಗೂ ಸಂಸ್ಕೃತ ಆಹಾರ ಉತ್ಪನ್ನಗಳು ಮತ್ತು ಉದ್ಯಮಗಳ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದೆ. PMFME ಯೋಜನೆಯ ಫಲಾನುಭವಿಗಳು, ರೈತರು ಮತ್ತು ಕೃಷಿ ಉದ್ಯಮಿಗಳು, ಕೃಷಿ ಹಾಗೂ ಆಹಾರ ಸಂಸ್ಕರಣಾ ಘಟಕಗಳು, ರೈತ ಉತ್ಪಾದಕ ಸಂಸ್ಥೆಗಳು (FPOs), ಸಹಕಾರ ಸಂಘಗಳು ಹಾಗೂ ಸ್ಟಾರ್ಟ್ಅಪ್ಗಳು ಮತ್ತು ರಫ್ತು ಯೋಗ್ಯ ಉತ್ಪನ್ನಗಳ ಉತ್ಪಾದಕರು ಕಾರ್ಯಕ್ರಮದಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ. ರಫ್ತು ತರಬೇತಿ, ಅಗತ್ಯ ದಾಖಲೆಗಳ ಮಾರ್ಗದರ್ಶನ, ಮಾರುಕಟ್ಟೆ ಸಂಪರ್ಕ ಹಾಗೂ ಯೋಜನಾ ನೆರವು ಸೇರಿದಂತೆ ವಿವಿಧ ಮಾಹಿತಿಯನ್ನು ನೀಡಲಾಗುತ್ತದೆ. ನೋಂದಣಿಗೆ ಕೊನೆಯ ದಿನಾಂಕ ಸೆಪ್ಟೆಂಬರ್ 25, 2026 ಎಂದು ತಿಳಿಸಲಾಗಿದ್ದು, ಆಸಕ್ತರು Google Form ಮೂಲಕ ಅಥವಾ ನೀಡಿರುವ 94834-00044, 9164924609 ಹಾಗೂ 9110646735 ಸಂಖ್ಯೆಗಳ ಮೂಲಕ ಸಂಪರ್ಕಿಸಬಹುದು.




