ಚಿಕ್ಕಮಗಳೂರು: ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿ ಗಣರಾಜ್ಯೋತ್ಸವವನ್ನು ಆಚರಿಸದೆ ಅಧಿಕಾರಿಗಳು ತೋರಿದ ನಿರ್ಲಕ್ಷ್ಯಕ್ಕೆ ಸಾರ್ವಜನಿಕರಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ತಾತ್ಕಾಲಿಕವಾಗಿ ಪ್ರಾಥಮಿಕ ಶಾಲಾ ಕಟ್ಟಡದಲ್ಲಿರುವ ನಾಡಕಚೇರಿಗೆ ಅಧಿಕಾರಿಗಳು ಬೀಗ ಹಾಕಿಕೊಂಡಿದ್ದು, ಇತ್ತೀಚೆಗೆ ಹೊಸ ನಾಡಕಚೇರಿ ಪ್ರಾರಂಭಗೊಂಡಿದ್ದರೂ ಹಳೆಯದು ಹಾಗೂ ಹೊಸದು ಎರಡೂ ಕಚೇರಿಗಳಲ್ಲಿ ಧ್ವಜಾರೋಹಣ ನಡೆಸದೇ ಇದ್ದದ್ದು ಗಮನಕ್ಕೆ ಬಂದಿದೆ. ರಾಷ್ಟ್ರದ ಮಹತ್ವದ ದಿನವನ್ನೇ ನಿರ್ಲಕ್ಷಿಸಿದ ಅಧಿಕಾರಿಗಳ ವರ್ತನೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಟೀಕೆಗೆ ಕಾರಣವಾಗಿದೆ.
