ಬೆಂಗಳೂರು: ಯಕ್ಷಗಾನ ಕಲಾವಿದರಲ್ಲಿ ಹಲವರು ಸಲಿಂಗಿಗಳು ಎಂಬ ವಿವಾದಾತ್ಮಕ ಹೇಳಿಕೆಯ ಹಿನ್ನೆಲೆಯಲ್ಲಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಕ್ಷಮೆ ಕೇಳಿದ್ದು, ಕೆಲ ಕಲಾವಿದರು ಸಲಿಂಗಿಗಳು ಎಂಬುದು ಹೊಸ ವಿಷಯವಲ್ಲ ಎಂದು ಸ್ಪಷ್ಟನೆ ನೀಡಿದ ಅವರು, ತಮ್ಮ ಉದ್ದೇಶ ಯಾರನ್ನೂ ಅವಮಾನಿಸುವುದಲ್ಲ, ಕಲಾವಿದರ ಬದುಕು ಉತ್ತಮಗೊಳಿಸುವುದು ಎಂದು ಹೇಳಿದ್ದಾರೆ. “ನನ್ನ ಹೇಳಿಕೆಯಿಂದ ಯಾರಿಗಾದರೂ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ ಹಾಗೂ ಯಕ್ಷಗಾನ ಕಲಾವಿದರು ಮತ್ತು ಅಭಿಮಾನಿಗಳಲ್ಲಿ ವಿಷಾದ ವ್ಯಕ್ತಪಡಿಸುತ್ತೇನೆ.” ಎಂದು ಹೇಳಿದ್ದಾರೆ. “ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸ್ಥಾನದಿಂದ ತೆಗೆದರೆ ಹೋಗುತ್ತೇನೆ, ಆದರೆ ನನ್ನ ಉದ್ದೇಶ ಅವಮಾನ ಮಾಡುವುದಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
