
ರಾಜ್ಯದಲ್ಲಿ ವರುಣನ ಆರ್ಭಟ ಹೆಚ್ಚಾಗಿದ್ದು, ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಸಂಭವವಿದ್ದು, ಜಿಲ್ಲೆಗಳ ಶಾಲೆಗಳಿಗೆ ರಜೆಯನ್ನು ನಿಗದಿಪಡಿಸಲಾಗಿದೆ. ಚಿಕ್ಕಮಗಳೂರು, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅಂಗನವಾಡಿ, ಶಾಲೆ ಹಾಗೂ ಕಾಲೇಜುಗಳಿಗೆ ರಜೆ ನೀಡಿ ಆಯಾ ಜಿಲ್ಲಾ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಎಲ್ಲಾ ಜಿಲ್ಲೆಗಳಲ್ಲಿ ಮೊದಲ ದಿನ ರೆಡ್ ಹಾಗೂ ಕೊನೆಯ ಎರಡು ದಿನ ಆರೇಂಜ್ ಅಲರ್ಟ್ ಘೋಷಿಸಲಾಗಿದೆ. ಮುಂದಿನ ೭ದಿನಗಳ ಕಾಲ ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಭರ್ಜರಿ ಮಳೆಯಾಗಲಿದ್ದು, ರಾಜ್ಯದ ಹಲವೆಡೆ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು ಜನರು ಎಚ್ಚರಿಕೆಯಿಂದ ಇರಲು ಹವಾಮಾನ ಇಲಾಖೆ ಸೂಚಿಸಿದೆ.