ಪಡಿತರ ಪಡೆಯಲು ಪಡಿತರ ಚೀಟಿ ಮುಖ್ಯವಾಗಿದ್ದು, ಪಡಿತರ ಚೀಟಿಗೆ ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ. ಪಡಿತರ ಚೀಟಿದಾರರು ತಮ್ಮ ಗುರುತು ನೋಂದಣಿ ಅಥವಾ ಮರುನೋಂದಾವಣೆ ಮಾಡಿಸದಿದ್ದರೆ ಕುಟುಂಬದ ಎಲ್ಲಾ ಸದಸ್ಯರು ನವೆಂಬರ್ ೩೦ರೊಳಗೆ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ತಮ್ಮ ಬೆರಳಚ್ಚು ನೀಡಿ ಇ-ಕೆವೈಸಿ ಮಾಡಿಸಿಕೊಳ್ಳಬೇಕೆಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸೂಚನೆ ನೀಡಿದೆ.
ತೆಗೆದುಕೊಂಡುಹೋಗಬೇಕಾದ ದಾಖಲೆಗಳು:
* ಪಡಿತರ ಚೀಟಿಯ ಒರಿಜಿನಲ್ ಪ್ರತಿ
* ಕುಟುಂಬದ ಸದಸ್ಯರ ಆಧಾರ್ ಕಾರ್ಡ್ ಫೋಟೋಕಾಪಿ
* ಕುಟುಂಬದ ಯಜಮಾನನ ಆಧಾರ್ ಕಾರ್ಡ್ ನಕಲು ಪ್ರತಿ
* ಬ್ಯಾಂಕ್ ಪಾಸ್ ಬುಕ್ನ ಫೋಟೋಕಾಪಿ
* ಕುಟುಂಬದ ಯಜಮಾನನ ಎರಡು ಪಾಸ್ ಪೋರ್ಟ್ ಅಳತೆಯ ಪೋಟೋ