
ಬ್ಯಾಂಕಿಂಗ್ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್:
ಭಾರತೀಯ ರಿಸರ್ವ್ ಬ್ಯಾಂಕ್ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಿದ್ದು, ಜನರಲ್ ವಿಭಾಗಗಳೊಂದಿಗೆ ಸಿಎಪಿಎಂ ಹಾಗೂ ಡಿಇಪಿಆರ್ ಇಲಾಖೆಗಳ ಖಾಲಿ ಇರುವ ಒಟ್ಟು 60 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಏಪ್ರಿಲ್ 29ರಿಂದ ಮೇ 20ರವರೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಪದವಿ ಅಥವಾ ಸ್ನಾತಕೋತ್ತರ ಪದವಿ ಹೊಂದಿರುವ 21ರಿಂದ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಹರಾಗಿದ್ದಾರೆ. ಆಕರ್ಷಕ ವೇತನ ಹಾಗೂ ವಿವಿಧ ಸೌಲಭ್ಯಗಳೊಂದಿಗೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿ ಆರಂಭಿಸಲು ಭಾರತೀಯ ರಿಸರ್ವ್ ಬ್ಯಾಂಕ್ ಉತ್ತಮ ಅವಕಾಶವನ್ನು ಒದಗಿಸಿದ್ದು, ಜೀವನದಲ್ಲಿ ಆರ್ಬಿಐನಲ್ಲಿ ಕೆಲಸ ಮಾಡುವ ಕನಸು ಹೊಂದಿರುವ ಅಭ್ಯರ್ಥಿಗಳಿಗೆ ಇದು ಸುವರ್ಣಾವಕಾಶವಾಗಿದೆ. ಈ ಹುದ್ದೆಗಳು ಉತ್ತಮ ಸ್ಥಾನ ಅಲಂಕರಿಸಲು ಉನ್ನತ ವೇದಿಕೆಯಾಗಿ ಪರಿಣಮಿಸಲಿದ್ದು, ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದಾಗಿದೆ.







