
ಬೆಂಗಳೂರು: ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗಾಗಿ ಒಟ್ಟು 70 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಇವುಗಳಲ್ಲಿ 11 ಹುದ್ದೆಗಳು ಕಲ್ಯಾಣ ಕರ್ನಾಟಕ ಅಭ್ಯರ್ಥಿಗಳಿಗೆ ಮೀಸಲಾಗಿವೆ. ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು ಹಾಗೂ ಆಂಗ್ಲ ಶೀಘ್ರಲಿಪಿ (ಹೈಯರ್ ಗ್ರೇಡ್) ಅಥವಾ ಶೀಘ್ರಲಿಪಿ ಮತ್ತು ಟೈಪಿಂಗ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ಕಮರ್ಷಿಯಲ್/ಸೆಕ್ರೆಟೇರಿಯಲ್ ಪ್ರಾಕ್ಟೀಸ್ ಡಿಪ್ಲೊಮಾ ಹೊಂದಿರಬೇಕು ಮತ್ತು ಕಂಪ್ಯೂಟರ್ ಜ್ಞಾನ ಕಡ್ಡಾಯವಾಗಿದೆ. ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ 40 ವರ್ಷವಾಗಿದ್ದು, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 43 ವರ್ಷ ಹಾಗೂ ಪ.ಜಾ, ಪ.ಪಂ ಮತ್ತು ಪ್ರವರ್ಗ 1 ಅಭ್ಯರ್ಥಿಗಳಿಗೆ 45 ವರ್ಷ ವಯೋಮಿತಿ ಸಡಿಲಿಕೆ ಇದೆ. ಅರ್ಜಿ ಶುಲ್ಕವಾಗಿ ಸಾಮಾನ್ಯ ಹಾಗೂ ಇತರೆ ಹಿಂದುಳಿದ ವರ್ಗದವರಿಗೆ ₹500 ಮತ್ತು ಪ.ಜಾ, ಪ.ಪಂ, ಪ್ರವರ್ಗ 1 ಹಾಗೂ ವಿಕಲಚೇತನ ಅಭ್ಯರ್ಥಿಗಳಿಗೆ ₹250 ನಿಗದಿ ಮಾಡಲಾಗಿದೆ. ಆಯ್ಕೆ ಪ್ರಕ್ರಿಯೆ ಶೀಘ್ರಲಿಪಿ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ನಡೆಯಲಿದ್ದು, ಆಯ್ಕೆಯಾದವರಿಗೆ ನ್ಯಾಯಾಲಯದ ನಿಯಮಾನುಸಾರ ವೇತನ ಹಾಗೂ ಸೌಲಭ್ಯಗಳು ದೊರೆಯುತ್ತವೆ. ಆಸಕ್ತರು ನ್ಯಾಯಾಲಯದ ಅಧಿಕೃತ ವೆಬ್ಸೈಟ್ ಮೂಲಕ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಏಪ್ರಿಲ್ 15 ಕೊನೆಯ ದಿನವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಬಹುದು.






