
ಚಿಕ್ಕಮಗಳೂರು: ತಾಲೂಕಿನ ಚುರ್ಚೆಗುಡ್ಡ ಹಾಗೂ ಹೊಸ ಕೋರ್ಟ್ ಹಿಂಭಾಗದ ನ್ಯಾಯಗಿರಿ ಮೀಸಲು ಅರಣ್ಯ ಪ್ರದೇಶದಲ್ಲಿ ಬಿಸಿಲಿನ ತೀವ್ರತೆಯಿಂದ ಬೆಂಕಿ ಕಾಣಿಸಿಕೊಂಡು ಸುಮಾರು 15 ಎಕರೆಗೂ ಅಧಿಕ ಅರಣ್ಯ ಪ್ರದೇಶ ದಹನಗೊಂಡ ಘಟನೆ ನಡೆದಿದೆ. ಬೆಂಕಿ ವೇಗವಾಗಿ ವ್ಯಾಪಿಸುತ್ತಿದ್ದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಗಳು ಆಗಮಿಸಿ, ಮರದ ಟೊಂಗೆಗಳ ಸಹಾಯದಿಂದ ಬೆಂಕಿ ನಂದಿಸಲು ಹರಸಾಹಸ ಪಟ್ಟರು. ಚಿಕ್ಕಮಗಳೂರು ತಾಲೂಕಿನ ಮೀಸಲು ಅರಣ್ಯ ಪ್ರದೇಶದಲ್ಲಿ ಸಂಭವಿಸಿದ ಈ ಘಟನೆ ಆತಂಕಕ್ಕೆ ಕಾರಣವಾಗಿದೆ.




