
ದೆಹಲಿ: ರೈಲ್ವೆ ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ರೈಲ್ವೆ ಸಚಿವಾಲಯದ ರೈಲ್ವೆ ನೇಮಕಾತಿ ಮಂಡಳಿ ಭರ್ಜರಿ ಅವಕಾಶ ನೀಡಿದ್ದು, ದೇಶಾದ್ಯಂತ ಖಾಲಿ ಇರುವ ಒಟ್ಟು 11,127 ಅಸಿಸ್ಟಂಟ್ ಲೋಕೊ ಪೈಲಟ್ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಬೆಂಗಳೂರು ವ್ಯಾಪ್ತಿಯಲ್ಲಿ 200 ಹುದ್ದೆಗಳ ನೇಮಕಾತಿ ನಡೆಯಲಿದ್ದು, ಎಸ್ಎಸ್ಎಲ್ಸಿ ಜೊತೆಗೆ ಎನ್ಸಿವಿಟಿ ಅಥವಾ ಎಸ್ಸಿವಿಟಿ ಮಾನ್ಯತೆ ಪಡೆದ ಸಂಸ್ಥೆಗಳಿಂದ ಫಿಟ್ಟರ್, ಎಲೆಕ್ಟ್ರಿಷಿಯನ್, ಇನ್ಸ್ಟ್ರುಮೆಂಟ್ ಮೆಕ್ಯಾನಿಕ್, ಎಲೆಕ್ಟ್ರಾನಿಕ್ಸ್ ಮೆಕ್ಯಾನಿಕ್, ಮೋಟಾರ್ ವಾಹನ ಮೆಕ್ಯಾನಿಕ್, ವೈರ್ಮ್ಯಾನ್, ಡೀಸೆಲ್ ಮೆಕ್ಯಾನಿಕ್, ಟರ್ನರ್, ಮೆಷಿನಿಸ್ಟ್, ರೆಫ್ರಿಜರೇಷನ್ ಮತ್ತು ಏರ್ ಕಂಡಿಷನಿಂಗ್ ಸೇರಿದಂತೆ ವಿವಿಧ ಟ್ರೇಡ್ಗಳಲ್ಲಿ ಐಟಿಐ ಪಾಸಾದವರು ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಹಾಗೂ ಗರಿಷ್ಠ 30 ವರ್ಷವಾಗಿದ್ದು, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಪಿಡಬ್ಲ್ಯುಬಿಡಿ ಅಭ್ಯರ್ಥಿಗಳಿಗೆ 10ರಿಂದ 15 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ. ಎಸ್ಸಿ, ಎಸ್ಟಿ, ಮಾಜಿ ಯೋಧರು, ಪಿಡಬ್ಲ್ಯುಬಿಡಿ, ಮಹಿಳಾ, ತೃತೀಯ ಲಿಂಗಿ ಮತ್ತು ಅಲ್ಪಸಂಖ್ಯಾತ ಅಭ್ಯರ್ಥಿಗಳಿಗೆ 250 ರೂ. ಹಾಗೂ ಇತರ ಅಭ್ಯರ್ಥಿಗಳಿಗೆ 500 ರೂ. ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಕಂಪ್ಯೂಟರ್ ಬೇಸ್ಡ್ ಟೆಸ್ಟ್, ವೈದ್ಯಕೀಯ ಪರೀಕ್ಷೆ, ದಾಖಲೆ ಪರಿಶೀಲನೆ ಮತ್ತು ಸಂದರ್ಶನದ ಮೂಲಕ ಆಯ್ಕೆ ನಡೆಯಲಿದ್ದು, ಆಯ್ಕೆಯಾದವರಿಗೆ ಮಾಸಿಕ 19,900 ರೂ. ವೇತನ ದೊರೆಯಲಿದೆ. ಆಸಕ್ತ ಅಭ್ಯರ್ಥಿಗಳು ಜೂನ್ 14ರೊಳಗೆ ಅಧಿಕೃತ ವೆಬ್ಸೈಟ್ https://www.rrbapply.gov.in/#/auth/home ಮೂಲಕ ಅರ್ಜಿ ಸಲ್ಲಿಸಿ ‘Create An Account’ ಆಯ್ಕೆ ಮಾಡಿ ನೋಂದಣಿ ಮಾಡಿಕೊಳ್ಳಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಹೆಚ್ಚಿನ ವಿವರಗಳಿಗೆ ವೆಬ್ಸೈಟ್ ವಿಳಾಸ : https://indianrailways.gov.in/ ಗೆ ಭೇಟಿ ನೀಡಿ.




