ಬೆಂಗಳೂರು: ಉಡುಪಿಯ ಕೃಷ್ಣ ಮಠಕ್ಕೆ ಶ್ರೀಗಂಧ ಪೂರೈಕೆ ವಿಚಾರದಲ್ಲಿ ಹೈಕೋರ್ಟ್ ಮಹತ್ವದ ಆದೇಶ ನೀಡಿದ್ದು, ಕೃಷ್ಣ ಮಠಕ್ಕೆ ಅಗತ್ಯವಿರುವ ಶ್ರೀಗಂಧವನ್ನು ಪೂರೈಕೆ ಮಾಡದ ಉಡುಪಿಯ ಜಿಲ್ಲಾಡಳಿತದ ಕ್ರಮ ಪ್ರಶ್ನಿಸಿ ಕೃಷ್ಣ ಮಠ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜು ಅವರು ಮಠಗಳು ತಮ್ಮ ಧಾರ್ಮಿಕ ಕಾರ್ಯಗಳಿಗೆ ಅಗತ್ಯವಿರುವ ಶ್ರೀಗಂಧವನ್ನು ಸ್ವತಃ ಬೆಳೆದುಕೊಳ್ಳುವ ಸಾಧ್ಯತೆಗಳ ಬಗ್ಗೆ ಪರಿಶೀಲಿಸಲು ಅರಣ್ಯ ಇಲಾಖೆಗೆ ನಿರ್ದೇಶನ ನೀಡಲಾಗಿದೆ. ಸರಕಾರವು ಅಗತ್ಯವಿದ್ದ ನಿಯಮಗಳನ್ನು ರೂಪಿಸುವಂತೆ ಸೂಚಿಸಲಾಗಿದೆ. ಇದೇ ವೇಳೆ ಮಠಕ್ಕೆ 10 ಕೆ.ಜಿ ಶ್ರೀಗಂಧ ಒದಗಿಸಲು ನ್ಯಾಯಾಲಯ ಆದೇಶಿಸಿದೆ.
