
ರಾಜ್ಯ ಸರ್ಕಾರದ ಶಕ್ತಿ ಯೋಜನೆಯು ಜಾರಿಯಾಗಿ ಭರ್ತಿ ಎರಡು ವರ್ಷಗಳು ಕಳೆದಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಜಾರಿಗೊಳಿಸಿದ ಗ್ಯಾರಂಟಿ ಯೋಜನೆ ಇದಾಗಿದೆ. ಶಕ್ತಿ ಯೋಜನೆಯಡಿ ಕರ್ನಾಟಕದ ಮಹಿಳೆಯರು ಆಧಾರ್ ಕಾರ್ಡ್ ತೋರಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ , ಬೆಂಗಳುರು ಮಹಾನಗರ ಸಾರಿಗೆ ಸಂಸ್ಥೆ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತು ಕಲ್ಯಾಣ ರಸ್ತೆ ಸಾರಿಗೆ ಸಂಸ್ಥೆ ಸಾರಿಗೆ ನಿಗಮಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಲು ಅವಕಾಶ ನೀಡಲಾಗಿದೆ. ಹಾಗಾಗಿ ಅಂದಿನಿಂದ 500 ಕೋಟಿ ಮಹಿಳೆಯರು ರಾಜ್ಯದ ಎಲ್ಲಾ ನಾಲ್ಕು ನಿಗಮಗಳ ಸಾರಿಗೆ ಬಸ್ಗಳಲ್ಲಿ ಸಂಚರಿಸಿದ್ದಾರೆ ಎಂದು ಕರ್ನಾಟಕ ಸಾರಿಗೆ ಇಲಾಖೆ ಮಾಹಿತಿ ನೀಡಿದೆ.
ಮುಖ್ಯ ಮಂತ್ರಿ ಸಿದ್ದರಾಮಯ್ಯ ನೆತೃತ್ವದ ಕಾಂಗ್ರೆಸ್ ಸರ್ಕಾರ ಮಹಿಳಾ ಸಬಲೀಕರದೆಡೆಗೆ ದಿಟ್ಟ ಹೆಜ್ಜೆ ಇಟ್ಟಿದೆ. ಶಕ್ತಿ ಗ್ಯಾರಂಟಿ ಯೋಜನೆಯಲ್ಲಿ ಪ್ರಯಾಣಿಸಿದ ಮಹಿಳಾ ಪ್ರಯಾಣಿಕರ ಸಂಖ್ಯೆ ಶೀಘ್ರವೇ 500 ಕೋಟಿ ತಲುಪಲಿದೆ. 2023ಜೂನ್ 11 ರಂದು ಮುಖ್ಯಮಂತ್ರಿಗಳು ಶಕ್ತಿ ಯೋಜನೆಗೆ ಚಾಲನೆ ನೀಡಿದ್ದು. ಅಂದಿನಿಂದ ಪ್ರತೀ ತಿಂಗಳು ಸರಿಸುಮಾರು 20-22 ಕೋಟಿ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡುತ್ತಲೇ ಬಂದಿದ್ದಾರೆ. 493 ಕೋಟಿ ಮಹಿಳೆಯರು ಈ ವರೆಗೆ ಉಚಿತ ಸಂಚಾರ ಮಾಡಿಕೊಂಡು ಬಂದಿದ್ದಾರೆ. ಇದೇ ತಿಂಗಳ ಜೂನ್ 14 ಅಥವಾ 15 ಕ್ಕೆ ಒಟ್ಟು 500 ಕೋಟಿ ಮಹಿಳಾ ಪ್ರಯಾಣಿಕರು ಉಚಿತವಾಗಿ ಯೋಜನೆಯಡಿ ಸಂಚರಿಸಿದಂತಾಗುತ್ತದೆ. ಸರ್ಕಾರಿ ಯೋಜನೆಯ ಸದ್ಬಳಕೆ, ಜನರಿಗೆ ಯೋಜನೆ ಲಾಭ ತಲುಪುವ ನಿಟ್ಟಿನಲ್ಲಿ ಇದೊಂದು ಹೊಸ ದಾಖಲೆ, ಮೈಲಿಗಲ್ಲು ಸಾಧನೆ ಎಂದು ಇಲಾಖೆ ಬಣ್ಣಿಸಿದೆ.