
ಶಿವಮೊಗ್ಗ: 2022ನೇ ಸಾಲಿನಲ್ಲಿ ೧೭ವರ್ಷದ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಳೂರು ಪೋಲಿಸ್ ಠಾಣೆಯಲ್ಲಿ ಪೋಕ್ಸೋ ಕಾಯಿದೆ ಅಡಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಥಹಳ್ಳಿ ತಾಲ್ಲೂಕಿನ ವ್ಯಕ್ತಿಯನ್ನು ಆರೋಪಿಯೆಂದು ಗುರುತಿಸಲಾಗಿದ್ದು, ಆತನಿಗೆ ೨೦ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ ೭೫,೦೦೦ ರೂ ದಂಡ ವಿಧಿಸಲಾಗಿದೆ. ಸಂತ್ರಸ್ಥ ಬಾಲಕಿಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ೪ ಲಕ್ಷ ರೂ ಪರಿಹಾರ ನೀಡುವಂತೆ ನ್ಯಾಯಾಲಯ ಆದೇಶಿಸಿದೆ. ನ್ಯಾಯಾಧೀಶರಾದ ನಿಂಗನಗೌಡ ಪಾಟೀಲ್ ರವರು ಆಗಸ್ಟ್ ೩೦ರಂದು ತೀರ್ಪು ನೀಡಿದ್ದಾರೆ ಎನ್ನಲಾಗಿದೆ. ಅಂದಿನ ಸರ್ಕಲ್ ಇನ್ಸ್ಪೆಕ್ಟ್ರ್ ಪ್ರವೀಣ್ ನೀಲಮ್ಮನವರ್ ಪ್ರಕರಣದ ತನಿಖೆ ಮಾಡಿ, ನ್ಯಾಯಾಲಯಕ್ಕೆ ಆರೋಪಪಟ್ಟಿ ದಾಖಲಿಸಿದ್ದಾರೆ. ಸರ್ಕಾರಿ ಅಭಿಯೋಜಕರಾದ ಶ್ರೀಧರ್ ಹೆಚ್.ಆರ್ ಅವರು ಸರ್ಕಾರದ ಪರವಾಗಿ ವಾದವನ್ನು ಮಂಡಿಸಿದ್ದರು.