ಕೊಟ್ಟಿಗೆಹಾರ: ಮೂಡಿಗೆರೆ ತಾಲೂಕಿನ ಬಾಳೂರು ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆಯಿಂದ ಶಾಲೆ ಮುಚ್ಚುವ ಸ್ಥಿತಿ ಉಂಟಾಗಿದ್ದು, ಇದರಿಂದ ಆಕ್ರೋಶಗೊಂಡ ಪೋಷಕರು ಮತ್ತು ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. 1 ರಿಂದ 7ನೇ ತರಗತಿಯವರೆಗೆ 30ಕ್ಕೂ ಹೆಚ್ಚು ಮಕ್ಕಳು ಓದುತ್ತಿರುವ ಶಾಲೆಯಲ್ಲಿ ಕೇವಲ ಒಬ್ಬ ಶಿಕ್ಷಕರಿದ್ದು, ಅವರು ಸಹ ಅನಾರೋಗ್ಯದಿಂದ ನಿಯಮಿತವಾಗಿ ಶಾಲೆಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ. ’ಮಕ್ಕಳಿದ್ದಾರೆ ಆದರೆ ಪಾಠ ಮಾಡಲು ಶಿಕ್ಷಕರೇ ಇಲ್ಲ, ಇದು ಸರ್ಕಾರದ ನಿರ್ಲಕ್ಷ್ಯ’ ಎಂದು ಗ್ರಾಮಸ್ಥ ರಘುಪತಿ ಆಕ್ರೋಶ ವ್ಯಕ್ತಪಡಿಸಿದರು. ಇನ್ನೂ ಅನೇಕ ದೂರುಗಳಿಗೆ ಕ್ರಮ ಕೈಗೊಳ್ಳದ ಶಿಕ್ಷಣ ಇಲಾಖೆ ವಿರುದ್ಧ ಗ್ರಾಮ ಪಂಚಾಯತಿ ಅಧ್ಯಕ್ಷ ಮನೋಜ್ ಅಸಮಾಧಾನ ವ್ಯಕ್ತಪಡಿಸಿ, ’ಊರಿನಲ್ಲೇ ಶಾಲೆ ಇದ್ದರೂ ನಮ್ಮ ಮಕ್ಕಳನ್ನು ಬೇರೆ ಶಾಲೆಗೆ ಸೇರಿಸಬೇಕಾದ ಪರಿಸ್ಥತಿ ಎದುರಾಗಿದೆ’ ಎಂದು ಗ್ರಾಮ ಪಂಚಾಯಿತಿ ಸದಸ್ಯ ಮಂಜುನಾಥ್ ಹೇಳಿದ್ದು, ಪ್ರತಿಭಟನಾಕಾರರು ಸರ್ಕಾರದ ನಿರ್ಲಕ್ಷ್ಯವನ್ನು ಗಂಭೀರವಾಗಿ ಪ್ರಶ್ನಿಸಿದರು.
