ರಾಯಚೂರು: ರಾಯಚೂರಿನಲ್ಲಿ ನಡೆದ ರಾಜ್ಯಮಟ್ಟದ 14 ವರ್ಷದ ಬಾಲಕಿಯರ ಶಟಲ್ ಬ್ಯಾಟ್ಮಿಟನ್ ನಲ್ಲಿ ಶೃಂಗೇರಿ ಪಟ್ಟಣದ ಜ್ಞಾನಭಾರತಿ ವಿದ್ಯಾ ಕೇಂದ್ರದ ವಿದ್ಯಾರ್ಥಿನಿ ಕುಮಾರಿ ಉನ್ನತಿ ಎಂ ಎನ್ ದ್ವಿತೀಯ ಸ್ಥಾನವನ್ನು ಪಡೆದು, ಮಧ್ಯ ಪ್ರದೇಶ ದಲ್ಲಿ ನಡೆಯುವ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ.
ಇವರಿಗೆ ಜ್ಞಾನಭಾರತಿ ವಿದ್ಯಾ ಕೇಂದ್ರದ ಶಾಲಾ ಆಡಳಿತ ಮಂಡಳಿ ಮುಖ್ಯ ಶಿಕ್ಷಕರು ಸಹ ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದನೆಯನ್ನು ಸಲ್ಲಿಸಿರುತ್ತಾರೆ.
