
ಮಂಗಳೂರು: ಮಂಗಳೂರು ಟೌನ್ ಹಾಲ್ನಲ್ಲಿ ನಡೆದ ವೈವಿದ್ಯಮ್ ಅಂತರ್ ಜಿಲ್ಲಾ ಮಟ್ಟದ ನೃತ್ಯ ಸ್ಪರ್ಧೆಯಲ್ಲಿ ವಿಜೇತ ವಿಶೇಷ ಶಾಲೆಯ ವಿದ್ಯಾರ್ಥಿಗಳು ಗಮನಾರ್ಹ ಸಾಧನೆ ಮೆರೆದಿದ್ದಾರೆ. 15 ವರ್ಷ ಮೇಲ್ಪಟ್ಟ ವಿಭಾಗದಲ್ಲಿ ಭಾಗವಹಿಸಿದ ಶಾಲೆಯ ವಿದ್ಯಾರ್ಥಿಗಳು ಮನಮೋಹಕ ನೃತ್ಯ ಪ್ರದರ್ಶನ ನೀಡಿ ದ್ವಿತೀಯ ಸ್ಥಾನ ಗಳಿಸುವ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಯ ಹಿಂದೆ ಶ್ರಮಿಸಿದ ತರಬೇತುದಾರರ ಪರಿಶ್ರಮವೂ ಮಹತ್ವದ್ದಾಗಿದ್ದು, ಅವರ ಸೇವೆಯನ್ನು ಶಾಲೆಯ ಆಡಳಿತ ಮಂಡಳಿ ಮೆಚ್ಚುಗೆ ವ್ಯಕ್ತಪಡಿಸಿದೆ. ವಿದ್ಯಾರ್ಥಿಗಳ ಈ ಯಶಸ್ಸಿಗೆ ಶಾಲೆಯ ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ವರ್ಗ ಹರ್ಷ ವ್ಯಕ್ತಪಡಿಸಿ ತರಬೇತುದಾರರು ಮತ್ತು ವಿದ್ಯಾರ್ಥಿಗಳನ್ನು ಅಭಿನಂದಿಸಿ, ಮುಂದಿನ ಸ್ಪರ್ಧೆಗಳಲ್ಲಿಯೂ ಇನ್ನಷ್ಟು ಸಾಧನೆ ಮಾಡಲಿ ಎಂದು ಶುಭ ಹಾರೈಸಿದರು.



