
ಚಿಕ್ಕಮಗಳೂರು: ಜಿಲ್ಲೆಯ ಶೃಂಗೇರಿ ತಾಲೂಕಿನ ಬೆಟ್ಟಗೆರೆ ಸಮೀಪದ ಕಲ್ಲೊಳ್ಳಿ ಗ್ರಾಮದಲ್ಲಿ ಆಟವಾಡುತ್ತಿದ್ದ ವೇಳೆ ನಡೆದ ದುರಂತದಲ್ಲಿ 8ನೇ ತರಗತಿ ವಿದ್ಯಾರ್ಥಿನಿ ಸಪ್ತಮಿ (14) ಸಾವನ್ನಪ್ಪಿದ್ದಾಳೆ. ಬೇಸಿಗೆ ರಜೆಗೆಂದು ಅಜ್ಜಿ ಮನೆಗೆ ಬಂದಿದ್ದ ಬಾಲಕಿ ಅಟ್ಟದ ಮೇಲೆ ಆಟವಾಡುತ್ತಿದ್ದಾಗ ಏಣಿಯಿಂದ ಕೆಳಗೆ ಇಳಿಯುವ ವೇಳೆ ಏಣಿಗೆ ಕಟ್ಟಿದ್ದ ಸೀರೆಯ ಹಗ್ಗ ಕುತ್ತಿಗೆಗೆ ಬಿಗಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದಾಳೆ. ಕೂಡಲೇ ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ ಎಂದು ತಿಳಿದುಬಂದಿದೆ. ಘಟನೆ ಸಂಬಂಧ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



