
ಶೃಂಗೇರಿ: ದಿನಾಂಕ 09-09-2025ರ ಮಂಗಳವಾರದ ಬೆಳಗ್ಗೆ 10.00 ಗಂಟೆಯಿಂದ ಸಂಜೆ 06 ಗಂಟೆಯವರೆಗೆ ಬಾಳೆಹೊನ್ನೂರು – ಶೃಂಗೇರಿ 33/11 ಕೆವಿ ಮಾರ್ಗದಲ್ಲಿ 2025-26ನೇ ಸಾಲಿನ ಮಾರ್ಗ ನಿರ್ವಹಣೆಯನ್ನು ಹಮ್ಮಿಕೊಂಡಿದ್ದಾರೆ. ಇದರಿಂದಾಗಿ ಶೃಂಗೇರಿ ಹಾಗೂ ಜಯಪುರ 33/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಹೊಮ್ಮುವ ಎಲ್ಲಾ ಪಟ್ಟಣ ಹಾಗೂ ಗ್ರಾಮೀಣ ಫೀಡರ್ಗಳಲ್ಲಿ ವಿದ್ಯುತ್ ನಿಲುಗಡೆಯಾಗುತ್ತದೆ ಎಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರ್ ತಿಳಿಸಿದ್ದಾರೆ.