
ಮಳೆಯ ರಾಯನು ಸ್ವಲ್ಪ ದಿನಗಳಿಂದ ತಗ್ಗಿದ್ದು, ಇದೀ ಮತ್ತೆ ಆಗಸ್ಟ್ 26 ರಿಂದ ರಾಜ್ಯಾದ್ಯಂತ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ವರುಣನ ಆರ್ಭಟ ಮುಂದುವರೆಯಲಿದೆ ಎಂದು ಹವಮಾನ ಇಲಾಖೆಯು ಮಾಹಿತಿಯನ್ನು ನೀಡಿದೆ. ಒಳನಾಡು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಗಾಳಿ ಮಳೆಯಾಗಲಿದೆ ಹಾಗೂ ಅಲ್ಲಲ್ಲಿ ಸಾಧಾರಣ ಮಳೆಯಾಗಲಿದೆ ಎನ್ನಲಾಗಿದೆ. ಆಗಸ್ಟ್ 26ರಿಂದ ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆ ಹಾಗೂ ಉಡುಪಿಯಲ್ಲಿ ಭಾರೀ ಮಳೆಯಾಗುವುದು ಎಂದು ಇಲಾಖೆ ಸ್ಪಷ್ಟ ಪಡಿಸಿದೆ.
ಚಿಕ್ಕಮಗಳೂರು, ಶಿವಮೊಗ್ಗ, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ, ತುಮಕೂರು, ರಾಮನಗರ, ಬೆಂಗಳೂರು ನಗರ ಹಲವು ಕಡೆಗಳಲ್ಲಿ ಬಿರುಗಾಳಿ, ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯಲ್ಲಿ ಗಾಳಿಯ ವೇಗ ಗಂಟೆಗೆ 40-50 ಕಿಮೀ, 60ಕಿ.ಮೀ ವೇಗದಲ್ಲಿ ಚಂಡಮಾರುತ ಬೀಸುವ ಸಾಧ್ಯತೆಯಿದೆ. ಇದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ