
ಬಾಳೆಹೊನ್ನೂರು: ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್ ಪು ತಾಲ್ಲೂಕಿನ ಬಾಳೆಹೊನ್ನೂರಿನ ಖಾಂಡ್ಯದಲ್ಲಿ ಆನೆ ದಾಳಿಗೆ ವ್ಯಕ್ತಿಯೊಬ್ಬರು ಬಲಿಯಾಗಿದ್ದಾರೆ. ಇದರಿಂದ ಅರಣ್ಯ ಇಲಾಖೆಯ ವಿರುದ್ಧ ಆಕ್ರೋಶಗೊಂಡ ಸ್ಥಳೀಯರು ಬಾಳೆಹೊನ್ನೂರು ಖಾಂಡ್ಯ ಸಂಪೂರ್ಣವಾಗಿ ಬಂದ್ ಮಾಡಲಾಗಿದೆ. ನಾಲ್ಕು ದಿನದ ಅಂತರದಲ್ಲಿ ಇಬ್ಬರು ಆನೆ ದಾಳಿಗೆ ಬಲಿಯಾಗಿದ್ದು. ಬಂದ್ ಹಿನ್ನಲೆ ಖಾಸಗಿ ಶಾಲೆಗಳಿಗೂ ರಜೆ ಘೋಷಣೆ ಮಾಡಲಾಗಿದೆ.
ಬಾಳೆಹೊನ್ನೂರು ಅರಣ್ಯ ವಲಯ ಕಛೇರಿ ಮುಂದೆ ಪ್ರತಿಭಟನೆ ನಡೆಸಲು ಮುಂದಾದ ಪ್ರತಿಭಟನಾಕಾರರು. ಚಿಕ್ಕಮಗಳೂರು – ಶೃಂಗೇರಿ ರಾಜ್ಯ ಹೆದ್ದಾರಿ ಸಂಪೂರ್ಣ ಬಂದ್. ರಸ್ತೆ ತಡೆ ನಡೆಸಿ ಪ್ರತಿಭಟನೆಗೆ ಮುಂದಾದ ಪ್ರತಿಭಟನಾಕಾರರು. ಮೃತದೇಹ ತಂದು ಅರಣ್ಯ ಇಲಾಖೆಯ ಮುಂದಿಟ್ಟು ಪ್ರತಿಭಟನೆಗೆ ತೀರ್ಮಾನಿಸಲಾಗಿದ್ದು. ಅರಣ್ಯ ಸಚಿವ ಕೆ.ಜೆ ಜಾರ್ಜ್, ಸಂಸದರು ಬರೋವರೆಗೂ ಪ್ರತಿಭಟನೆಗೆ ಮುಂದಾದ ಸಂಘಟನೆಗಳು.
ಶಾಸಕ ಟಿ.ಡಿ ರಾಜೇಗೌಡ, ಮಾಜಿ ಸಚಿವ ಡಿ.ಎನ್ ಜೀವರಾಜ್, ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಸುಧಾಕರ್ ಸೇರಿ ಹಲವುರು ಭಾಗಿಯಾಗಿದ್ದರು. ಸರ್ವ ಪಕ್ಷ, ಸರ್ವ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದೆ.