ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಅಕ್ರಮವಾಗಿ ಸಿಗುತ್ತಿದ್ದ ಬೀಡಿ, ಸಿಗರೇಟ್ ಮಾರಾಟವನ್ನು ಹೊಸ ಮುಖ್ಯ ಅಧೀಕ್ಷಕ ಅಂಶುಕುಮಾರ್ ಕಟ್ಟುನಿಟ್ಟಾಗಿ ನಿಲ್ಲಿಸಿದ್ದರಿಂದ ಕೈದಿಗಳು ಕಳೆದ ಮೂರು ದಿನಗಳಿಂದ ಊಟ-ತಿಂಡಿ ಬಿಟ್ಟು ಧರಣಿ ಮತ್ತು ಉಪವಾಸ ಪ್ರತಿಭಟನೆ ನಡೆಸುತ್ತಿದ್ದಾರೆ. ಇತ್ತೀಚಿನ ವಿಶೇಷ ಶೋಧದಲ್ಲಿ 50ಕ್ಕೂ ಹೆಚ್ಚು ಮೊಬೈಲ್ಗಳು ವಶವಾಗಿದ್ದ ಹಿನ್ನೆಲೆಯಲ್ಲಿ ಆಡಳಿತ ಜೈಲು ನಿಯಮಾವಳಿಯನ್ನು ಕಠಿಣವಾಗಿ ಜಾರಿಗೊಳಿಸಿದ್ದು, ಅಸಮಾಧಾನಗೊಂಡ ಕೈದಿಗಳು ಮತ್ತೆ ನಿಷಿದ್ಧ ವಸ್ತುಗಳ ಮಾರಾಟಕ್ಕೆ ಅನುಮತಿ ನೀಡಬೇಕು ಎಂದು ಒತ್ತಾಯಿಸುತ್ತಿದ್ದಾರೆ. ಜೈಲಿನೊಳಗಿನ ಅಕ್ರಮ ಚಟುವಟಿಕೆಗಳ ವಿಡಿಯೋ ವೈರಲ್ ಆದ ನಂತರ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದ್ದು, ಕಾರಗೃಹ ಸುಧಾರಣೆಗಾಗಿ ಸರ್ಕಾರ ಹೈಪವರ್ ಸಮಿತಿಯನ್ನು ರಚಿಸಿ ವಿವಿಧ ಜೈಲುಗಳ ತಾಂತ್ರಿಕ ಮತ್ತು ಆಡಳಿತ ಸುಧಾರಣೆಗಳನ್ನು ಪರಿಶೀಲಿಸುತ್ತಿದೆ.
