ಕಾಫಿನಾಡಿನಲ್ಲಿ 2026ರ ಹೊಸ ವರ್ಷಾಚರಣೆಯನ್ನು ಶಾಂತಿಯುತವಾಗಿ ಮತ್ತು ಸುರಕ್ಷಿತವಾಗಿ ಆಚರಿಸುವ ನಿಟ್ಟಿನಲ್ಲಿ ಜಿಲ್ಲಾ ಪೊಲೀಸರು ಹೋಟೆಲ್, ಹೋಂ ಸ್ಟೇ, ರೆಸಾರ್ಟ್ ಹಾಗೂ ಬಾರ್ ಮಾಲೀಕರಿಗೆ ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಪ್ರಕಟಿಸಿದ್ದು, ಆಚರಣೆಯ ಸಂದರ್ಭದಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಲು ಪ್ರಮುಖ ಸ್ಥಳಗಳಲ್ಲಿ ಕಡ್ಡಾಯವಾಗಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಕೆ ಮತ್ತು ಬರುವ ಅತಿಥಿಗಳ ಗುರುತಿನ ಚೀಟಿ ಹಾಗೂ ವಾಹನ ಪರವಾನಗಿಯಂತಹ ಸಂಪೂರ್ಣ ವಿವರಗಳನ್ನು ಸಂಗ್ರಹಿಸಿ ಗಣಕೀಕೃತ ದಾಖಲೆಗಳನ್ನು ನಿರ್ವಹಿಸಬೇಕು. ಕಾರ್ಯಕ್ರಮಗಳಿಗೆ ಧ್ವನಿವರ್ಧಕ ಬಳಕೆಗೆ ಅನುಮತಿ ಕಡ್ಡಾಯವಾಗಿದ್ದು, ಮಾಲಿನ್ಯಕಾರಕ ಪಟಾಕಿ ಸಿಡಿಸುವುದು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಅತಿಥಿಗಳಿಗೆ ಉತ್ತಮ ವ್ಯವಸ್ಥೆ ಕಲ್ಪಿಸುವುದು ಮಾಲೀಕರ ಜವಾಬ್ದಾರಿಯಾಗಿದೆ. ನಿಯಮ ಉಲ್ಲಂಘಿಸಿದ ಪ್ರಕರಣಗಳು ಕಂಡುಬಂದಲ್ಲಿ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಇಲಾಖೆ ಎಚ್ಚರಿಸಿದೆ.
