ಶೃಂಗೇರಿ: ಪಟ್ಟಣದ ಸರ್ಕಾರಿ ಪಶು ಆಸ್ಪತ್ರೆಯಲ್ಲಿ ನೀರಿನ ಸೌಕರ್ಯ ಇಲ್ಲದೆ ಪಶುಗಳು ಹಾಗೂ ಸಿಬ್ಬಂದಿಗಳು ಪರದಾಡುವಂತಾಗಿದೆ. ಕಳೆದ ಕೆಲ ತಿಂಗಳಿಂದ ಶೃಂಗೇರಿ ಪಟ್ಟಣದ ಪಶು ಆಸ್ಪತ್ರೆಗೆ ಪಟ್ಟಣ ಪಂಚಾಯಿತಿ ವತಿಯಿಂದ ಸರಬರಾಜಾಗುತ್ತಿದ್ದ ನೀರು ಇದೀಗ ಸ್ಥಗಿತಗೊಂಡಿದ್ದು, ಹಲವು ಬಾರಿ ಆಸ್ಪತ್ರೆಯ ಅಧಿಕಾರಿಗಳು ಪಂಚಾಯಿತಿ ಗಮನಕ್ಕೆ ತಂದರೂ ನೀರಿನ ಸೌಲಭ್ಯ ಒದಗಿಸಿಲ್ಲ. ಇದರಿಂದ ಚಿಕಿತ್ಸೆಗೆ ಬರುವ ಪಶುಗಳಿಗೆ ಹಾಗೂ ಸಾರ್ವಜನಿಕರಿಗೆ ಕೈ ತೊಳೆಯಲು ನೀರಿಲ್ಲದ ಪರಿಸ್ಥಿತಿ ಎದುರಾಗಿದೆ. ಪಟ್ಟಣ ಪಂಚಾಯಿತಿ ಕೂಡಲೇ ಈ ಬಗ್ಗೆ ಗಮನ ಹರಿಸಿ, ಸೂಕ್ತ ನೀರಿನ ವ್ಯವಸ್ಥೆ ಕಲ್ಪಿಸಬೇಕಿದೆ.
