
ಬೆಂಗಳೂರು: 2025-26ನೇ ಸಾಲಿನ ಎಸ್ಎಸ್ಎಲ್ಸಿ ಫಲಿತಾಂಶವನ್ನು ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರಕಟಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ, ಉಡುಪಿ ದ್ವಿತೀಯ ಹಾಗೂ ಉತ್ತರ ಕನ್ನಡ ತೃತೀಯ ಸ್ಥಾನ ಪಡೆದಿವೆ. ಈ ಬಾರಿಯ ಫಲಿತಾಂಶ ದಾಖಲೆ ಮಟ್ಟದಲ್ಲಿ ಉತ್ತಮವಾಗಿರುವ ಹಿನ್ನೆಲೆ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮೂರನೇ ಬಾರಿ ಪರೀಕ್ಷೆ ಇರುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ, ಆದರೆ ಎರಡನೇ ಪರೀಕ್ಷೆ ಮೇ 18ರಿಂದ ಮೇ 25ರವರೆಗೆ ನಡೆಯಲಿದ್ದು, ಅದರಲ್ಲಿ ಅನುತ್ತೀರ್ಣರಾದವರು ಉತ್ತೀರ್ಣರಾಗಲು ಮತ್ತೊಂದು ಅವಕಾಶ ಲಭ್ಯವಿದೆ, ಇದಕ್ಕಾಗಿ ಶಿಕ್ಷಕರು ಹಾಗೂ ಶಿಕ್ಷಣ ಇಲಾಖೆ ವಿಶೇಷ ತರಬೇತಿ ನೀಡಲಿದೆ ಎಂದು ತಿಳಿಸಿದ್ದಾರೆ.




