
ಚಿಕ್ಕಮಗಳೂರು: ನಗರದ ಹಾಲೇನಹಳ್ಳಿ ಪ್ರದೇಶದಲ್ಲಿ 55 ವರ್ಷದ ಗೃಹಿಣಿಯೊಬ್ಬರು ರಿವಾಲ್ವರ್ನಿಂದ ಗುಂಡು ಹಾರಿಸಿಕೊಂಡ ಸ್ಥಿತಿಯಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ನಡೆದಿದೆ. ಸುಮ (55) ಮೃತ ಗೃಹಿಣಿಯಾಗಿದ್ದು, ಮನೆಯಲ್ಲಿ ಯಾರೂ ಇಲ್ಲದ ವೇಳೆ ಈ ಘಟನೆ ನಡೆದಿರುವುದಾಗಿ ತಿಳಿದುಬಂದಿದೆ. ಲೈಸೆನ್ಸ್ ಹೊಂದಿದ್ದ ರಿವಾಲ್ವರ್ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳದಲ್ಲಿ ಡೆತ್ ನೋಟ್ ಪತ್ತೆಯಾಗಿರುವ ಹಿನ್ನೆಲೆ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆಯ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮೃತ ಸುಮ ಅವರ ಪತಿ ರಾಜೇಶ್ ಉದ್ಯಮಿಯಾಗಿದ್ದು, ಸಾವಿನ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ. ಡೆತ್ ನೋಟ್ ಆಧರಿಸಿ ಪೊಲೀಸರು ತನಿಖೆ ಮುಂದುವರಿಸಿದ್ದು, ಘಟನಾ ಸ್ಥಳಕ್ಕೆ ಬಸವನಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಬಸವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.



