
ಮಹಾರಾಷ್ಟ್ರ: ಅಧಿಕಾರಕ್ಕೆ ಏರುವ ವಿಚಾರದಲ್ಲಿ ಬಿಜೆಪಿ ಮತ್ತು ಮಿತ್ರ ಪಕ್ಷಗಳ ನಡುವೆ ನಡೆದಿದ್ದ ಗೊಂದಲಕ್ಕೆ ಕೊನೆಗೂ ತೆರೆಬಿದ್ದಿದ್ದು, ನಾಳೆ ಮಹಾರಾಷ್ಟ್ರದಲ್ಲಿ ನೂತನ ಸರ್ಕಾರ ಆಡಳಿತಕ್ಕೆ ಬರಲಿದೆ. ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ದೇವೇಂದ್ರ ಫಡ್ನವಿಸ್ ಅವರ ಹೆಸರನ್ನು ಅನುಮೋದಿಸಲಾಗಿದ್ದು, ಬಿಜೆಪಿ ಪಕ್ಷದ ಶಾಸಕಾಂಗ ಸಭೆಯಲ್ಲಿ ದೇವೇಂದ್ರ ಫಡ್ನವೀಸ್ ಅವರನ್ನು ಸಿಎಲ್ಪಿ ನಾಯಕರನ್ನಾಗಿ ಆಯ್ಕೆ ಮಾಡಲಾಯಿತು. ಇದರ ಜೊತೆಗೆ ಏಕನಾಥ್ ಶಿಂಧೆ ಮತ್ತು ಅಜಿತ್ ಪವಾರ್ ಅವರನ್ನು ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯನ್ನಾಗಿ ಮಾಡಲು ಒಪ್ಪಿಗೆ ನೀಡಲಾಗಿದೆ. ಈ ನಿರ್ಧಾರದ ನಂತರ, ಈಗ ದೇವೇಂದ್ರ ಫಡ್ನವೀಸ್ ಅವರು ಬೆಂಬಲಿಗ ಶಾಸಕರ ಹೆಸರುಗಳೊಂದಿಗೆ ಮಹಾರಾಷ್ಟ್ರ ರಾಜ್ಯಪಾಲರನ್ನು ಭೇಟಿ ಮಾಡಿ ಸರ್ಕಾರ ರಚನೆಗೆ ಹಕ್ಕು ಮಂಡಿಸಲಿದ್ದಾರೆ. ನಾಳೆ ಮಹಾರಾಷ್ಟ್ರದ ಆಜಾದ್ ಮೈದಾನದಲ್ಲಿ ಪ್ರಮಾಣ ವಚನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಬಿಜೆಪಿಯ ಹಲವು ಹಿರಿಯ ನಾಯಕರು ಇದರಲ್ಲಿ ಭಾಗಿಯಾಗಲಿದ್ದಾರೆ.