
ಶೃಂಗೇರಿ: ಜ್ಞಾನಭಾರತಿ ವಿದ್ಯಾಕೇಂದ್ರದ ವಿದ್ಯಾರ್ಥಿನಿ ಕು. ದ್ಯುತಿ ಅವರು ಜಿಲ್ಲಾಮಟ್ಟದ ವಿಜ್ಞಾನ ವಿಚಾರಗೋಷ್ಠಿಯಲ್ಲಿ ದ್ವಿತೀಯ ಸ್ಥಾನ ಗಳಿಸುವ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ. ದಿನಾಂಕ 23.10.2026ರಂದು ಬಿ.ಆರ್.ಸಿ.ಯಲ್ಲಿ ನಡೆದ ತಾಲೂಕುಮಟ್ಟದ ವಿಜ್ಞಾನ ವಿಚಾರಗೋಷ್ಠಿಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದ ಅವರು, ಚಿಕ್ಕಮಗಳೂರಿನ ಡಯಟ್ನಲ್ಲಿ ನಡೆದ ಜಿಲ್ಲಾಮಟ್ಟದ ವಿಜ್ಞಾನ ವಿಚಾರಗೋಷ್ಠಿಯಲ್ಲಿ ದ್ವಿತೀಯ ಸ್ಥಾನ ಗಳಿಸಿ ಗಮನಾರ್ಹ ಸಾಧನೆ ಮಾಡಿದ್ದಾರೆ. ವಿದ್ಯಾರ್ಥಿನಿಯ ಈ ಸಾಧನೆಗೆ ಜ್ಞಾನಭಾರತಿ ಆಡಳಿತ ಮಂಡಳಿ, ವಿದ್ಯಾಕೇಂದ್ರದ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕ ವೃಂದ ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ.





