
ಸೆಪ್ಟೆಂಬರ್ 05ರಂದು ಪ್ರತೀ ವರ್ಷವೂ ಶಿಕ್ಷಕರ ದಿನಾಚರಣೆಯನ್ನು ಆಚರಣೆ ಮಾಡಲಾಗುತ್ತದೆ. ಪ್ರಖ್ಯಾತ ತತ್ವ ಜ್ಞಾನಿಗಳಾದ, ಸೆ.೦೫ರಂದು ಭಾರತದ ಎರಡನೇ ರಾಷ್ಟ್ರಪತಿಗಳಾಗಿ ಸೇವೆ ಸಲ್ಲಿಸಿದ ಹಾಗೂ ಡಾ.ಸರ್ವಪಲ್ಲಿ ರಾಧಾಕೃಷ್ಣನ್ರವರ ಜನ್ಮ ದಿನವೂ ಆಗಿದೆ. ಇವರು ಶಿಕ್ಷಣ ಕ್ಷೇತ್ರಕ್ಕೆ ಅಪಾರ ಕೊಡುಗೆಯನ್ನು ನೀಡಿದ್ದಾರೆ. ಇವರ ಭೋದನೆ ಹಾಗೂ ಮಾರ್ಗದರ್ಶನದಿಂದ ಸ್ಫೂರ್ತಿಗೊಂಡ ವಿದ್ಯಾರ್ಥಿಗಳಲ್ಲಿ, ಒಬ್ಬ ವಿದ್ಯಾರ್ಥಿ ಅವರ ಜನ್ಮ ದಿನವನ್ನು ಆಚರಣೆ ಮಾಡಲು ಮುಂದಾಗಿದ್ದರು, ಆದರೆ ಡಾ. ಸರ್ವಪಲ್ಲಿ ರಾಧಾಕೃಷ್ಣನ್ರವರು ನನ್ನ ಜನ್ಮದಿನವನ್ನು ಆಚರಣೆ ಮಾಡುವ ಬದಲು, ಸೆಪ್ಟೆಂಬರ್ ೦೫ರಂದು ಶಿಕ್ಷಕರ ದಿನಾಚರಣೆ ಎಂದು ಗುರುತಿಸಿ ಆಚರಿಸಿದರೆ ನನಗೆ ತುಂಬಾ ಹೆಮ್ಮೆಯಾಗುತ್ತದೆ ಎಂದಿದ್ದರು. ಆದ್ದರಿಂದ ಅವರ ಜನ್ಮದಿನವನ್ನೇ ಇಂದು ಶಿಕ್ಷಕರ ದಿನವಾಗಿ ಆಚರಿಸಲಾಗುತ್ತದೆ.
ಸರ್ಕಾರಿ ಕಛೇರಿಗಳಲ್ಲಿ, ಶಾಲಾ-ಕಾಲೇಜುಗಳಲ್ಲಿ ಶಿಕ್ಷರ ದಿನಾಚರಣೆಯನ್ನು ಆಚರಣೆ ಮಾಡಲಾಗುತ್ತದೆ. ಶಾಲಾ ಕಾಲೇಜುಗಳಲ್ಲಿ ಇತರೆ ದಿನಗಳಲ್ಲಿ ಶಿಕ್ಷರು ಮಕ್ಕಳಿಗೆ ಆಟೋಟ ಸ್ಪರ್ಧೆಗಳನ್ನು ಮಾಡಿದರೆ, ಶಿಕ್ಷಕರ ದಿನಾಚರಣೆಯಂದು ಮಕ್ಕಳು ಶಿಕ್ಷಕರಿಗೆ ಆಟವಾಡಿಸಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸುತ್ತಾರೆ. ಎಲ್ಲೆಡೆ ಸಂತೋಷದಿಂದ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಗುತ್ತದೆ.