
ಶೃಂಗೇರಿ: ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿಸಿ ಇಂದು ಶೃಂಗೇರಿ ತಾಲೂಕಿನಲ್ಲಿ ಬಂದ್ಗೆ ಕರೆ ನೀಡಲಾಗಿದ್ದು, ಪಟ್ಟಣದಲ್ಲಿ ಪ್ರತಿಭಟನೆಯ ಕಾವು ಹೆಚ್ಚಾಗಿದೆ. ಕಸ್ತೂರಿ ರಂಗನ್ ವರದಿಯಿಂದ ಮಲೆನಾಡಿನ ಜನಜೀವನ, ಕೃಷಿ ಚಟುವಟಿಕೆಗಳು ಹಾಗೂ ಅಭಿವೃದ್ಧಿ ಕಾರ್ಯಗಳಿಗೆ ತೊಂದರೆಯಾಗಬಹುದು ಎಂಬ ಆತಂಕ ವ್ಯಕ್ತಪಡಿಸಿರುವ ರೈತ ಒಕ್ಕೂಟ ಸೇರಿದಂತೆ ವಿವಿಧ ಸಂಘಟನೆಗಳು ಬಂದ್ಗೆ ಕರೆ ನೀಡಿವೆ. ವರದಿ ಜಾರಿಯನ್ನು ವಿರೋಧಿಸಿ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆಯೂ ನಡೆಯಲಿದ್ದು, ಬಂದ್ ಹಿನ್ನೆಲೆಯಲ್ಲಿ ಶೃಂಗೇರಿಯಲ್ಲಿ ಅಂಗಡಿ-ಮುಂಗಟ್ಟುಗಳು ಸೇರಿದಂತೆ ಹಲವು ವಾಣಿಜ್ಯ ಚಟುವಟಿಕೆಗಳು, ಶಾಲಾ ಕಾಲೇಜುಗಳು ಇಂದು ಸ್ಥಗಿತಗೊಂಡಿದ್ದು, ಪಟ್ಟಣ ಬಹುತೇಕ ಸ್ತಬ್ಧವಾಗಿದೆ. ಅಗತ್ಯ ಸೇವೆಗಳಾದ ಆಸ್ಪತ್ರೆ, ವೈದ್ಯಕೀಯ ಸೇವೆ ಹಾಗೂ ಆಂಬ್ಯುಲೆನ್ಸ್ ಸಂಚಾರಕ್ಕೆ ವಿನಾಯಿತಿ ನೀಡಲಾಗಿದೆ.
ಬೆಳಿಗ್ಗೆ 10 ಗಂಟೆಗೆ ಶೃಂಗೇರಿ ಸ್ವಾಗತ ದ್ವಾರದಿಂದ ಪ್ರತಿಭಟನಾ ಮೆರವಣಿಗೆ ಆರಂಭವಾಗಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಾಗಲಿದೆ. ಬಳಿಕ ಕುವೆಂಪು ಬಸ್ ನಿಲ್ದಾಣದ ಬಳಿ ಬೃಹತ್ ಸಮಾವೇಶ ನಡೆಯಲಿದ್ದು,
ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿಸಿ ಮಲೆನಾಡಿನ ವಿವಿಧ ಭಾಗಗಳಲ್ಲಿ ಕಳೆದ ಕೆಲವು ವಾರಗಳಿಂದ ಪ್ರತಿಭಟನೆಗಳು ನಡೆಯುತ್ತಿದ್ದು, ಇಂದು ಶೃಂಗೇರಿಯಲ್ಲೂ ಹೋರಾಟ ತೀವ್ರಗೊಂಡಿದೆ.
ಈ ನಡುವೆ ಕಸ್ತೂರಿ ರಂಗನ್ ವರದಿ ಕುರಿತು ಚರ್ಚಿಸಲು ಇಂದಿನಿಂದ ಮೂರು ದಿನಗಳ ವಿಶೇಷ ವಿಧಾನಮಂಡಲ ಅಧಿವೇಶನ ಆರಂಭವಾಗಿದ್ದು, ವರದಿ ಕುರಿತಂತೆ ಚರ್ಚೆ ನಡೆಯಲಿದೆ.




