ಕೊಟ್ಟಿಗೆಹಾರ: ಮಂಗಳೂರಿನಿಂದ ಮೂಡಿಗೆರೆಗೆ ಬರುತ್ತಿದ್ದ ಐಟ್ವೆಂಟಿ ಕಾರು ಚಾಲಕನ ನಿಯಂತ್ರಣ ತಪ್ಪಿ ಬಣಕಲ್ ಠಾಣಾ ವ್ಯಾಪ್ತಿಯ ಮಲೆನಾಡು ಕೆಫೆ ಸಮೀಪ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಅಪಘಾತದ ತೀವ್ರತೆ ಇದ್ದರೂ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದ್ದು, ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಗೊಂಡ ಚಾಲಕನಿಗೆ ತಕ್ಷಣ ಸ್ಥಳೀಯರು ನೆರವಿಗೆ ಧಾವಿಸಿ ಬಣಕಲ್ ಆಸ್ಪತ್ರೆಗೆ ಕರೆದೊಯ್ಯಿ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.
