
Rainy weather
ಬೆಂಗಳೂರು: ರಾಜ್ಯದಲ್ಲಿ ಒಂದು ತಿಂಗಳಿನಿಂದ ಮಳೆ ಬಿಟ್ಟು ಬಿಡದೆ ಕಾಡುತ್ತಿದ್ದು, ವಿಪರೀತ ಮಳೆಯಿಂದಾಗಿ ಅನೇಕರ ಜೀವನ ಅಸ್ತವ್ಯಸ್ತವಾಗಿದೆ. ನಿರಂತರ ಮಳೆ, ಚಳಿ ಕಾರಣದಿಂದಾಗಿ ಜನರ ಆರೋಗ್ಯದಲ್ಲಿ ಏರು ಪೇರಾಗಿದೆ. ಕೊಡಗು, ಮಂಗಳೂರು ಹಾಗೂ ಇತರೆ ಭಾಗಗಳಲ್ಲಿ ಪ್ರವಾಹ ಉಂಟಾಗಿದ್ದು, ಪದೇ ಪದೇ ಶಾಲಾ-ಕಾಲೇಜಿಗೆ ರಜೆ ಘೋಷಿಸಲಾಗಿತ್ತು. ಆದರೆ ಇದೀಗ ಮಳೇರಾಯ ತನ್ನ ಆಟಕ್ಕೆ ಕೊಂಚ ವಿರಾಮ ಕೊಟ್ಟಿದ್ದಾನೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮೀಣ, ತುಮಕೂರು, ದಾವಣಗೆರೆ, ಚಿತ್ರದುರ್ಗ, ಹಾವೇರಿ, ಗದಗ, ಕೊಪ್ಪಳ, ಧಾರವಾಡ, ಬೆಳಗಾವಿ, ವಿಜಯಪುರ, ಚಾಮರಾಜನಗರ, ಮೈಸೂರು, ಮಂಡ್ಯ ಮುಂತಾದ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆ ಬರಬಹುದು ಹಾಗೂ ಶಿವಮೊಗ್ಗ, ಕೊಡಗು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಸಾಧಾರಣ ಮಳೆ ಆಗುವ ಮುನ್ಸೂಚನೆ ಇದ್ದು, ತಾಪಮಾನ ಈ ವಾರಾಂತ್ಯಕ್ಕೆ ಸಹಜ ಸ್ಥಿಗಿಗೆ ಬರಬಹುದು ಎಂದು ಬುಧವಾರ ಹಮಾನ ಇಲಾಖೆ ತಿಳಿಸಿದೆ.