ಶಿವಮೊಗ್ಗ: ಜಿಲ್ಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ 5೦೦ಕ್ಕೂ ಅಧಿಕ ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ್ದು, ಸಾಗರ, ಹೊಸನಗರ, ಶಿಕಾರಿಪುರ, ಶಿವಮೊಗ್ಗ, ಸೊರಬ ಮತ್ತು ತೀರ್ಥಹಳ್ಳಿಯಲ್ಲಿ ಉದ್ಯೋಗ ಅವಕಾಶವಿದೆ. ಆನ್ಲೈನ್ ಮೂಲಕ ಅರ್ಜಿ ಹಾಗೂ ಅಗತ್ಯ ದಾಖಲೆಗಳನ್ನು ಸಲ್ಲಿಸಬೇಕು. ಆಫ್ಲೈನ್ನಲ್ಲಿ ಸಲ್ಲಿಸುವ ದಾಖಲೆಗಳನ್ನು ಪರಿಗಣಿಸಲಾಗುವುದಿಲ್ಲ, ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ.
