
ತೀರ್ಥಹಳ್ಳಿ: ಸೊಪ್ಪುಗುಡ್ಡೆಯಲ್ಲಿರುವ ಡಿ. ದೇವರಾಜ್ ಅರಸು ಹಿಂದುಳಿದ ವರ್ಗದ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯ ಹಾಗೂ ಡಾ.ಬಿ.ಆರ್ ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಪಟ್ಟಣ ಪಂಚಾಯಿತಿ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಬುಧವಾರ ಬೆಳ್ಳಂಬೆಳಗ್ಗೆ ಹಾಸ್ಟೆಲ್ಗೆ ಭೇಟಿ ನೀಡಿದ್ದು ಸ್ವಚ್ಚತೆ ಪರೀಕ್ಷಿಸಿದ್ದಾರೆ. ಬಾಲಕೀಯರ ವಿದ್ಯಾರ್ಥಿ ನಿಲಯದಲ್ಲಿ ಕುಡಿಯುವ ನೀರು ಹಾಗೂ ಸ್ನಾನಕ್ಕೆ ಬಿಸಿ ನೀರು ಸರಿಯಾಗಿ ಸಿಗುತ್ತಿಲ್ಲವೆಂದು ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದು, ಇದರ ಬಗ್ಗೆ ಹಿರಿಯ ಹಾಸ್ಟೆಲ್ ಅಧಿಕಾರಿಯೊಂದಿಗೆ ಚರ್ಚೆ ನಡೆಸುವುದಾಗಿ ತಿಳಿಸಿದ್ದಾರೆ.