
ಬೆಳ್ತಂಗಡಿ: ತಾಲೂಕಿನ ಚಾರ್ಮಾಡಿ ಘಾಟ್ನ ಒಂಬತ್ತನೇ ತಿರುವಿನಲ್ಲಿ ಬ್ರೇಕ್ ವೈಫಲ್ಯದಿಂದ ಟಿಟಿ ವಾಹನ ಪಲ್ಟಿಯಾಗಿ ಒಂಬತ್ತು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಓರ್ವ ವೃದ್ಧರು ಸಾವನ್ನಪ್ಪಿರುವ ಘಟನೆ ಶನಿವಾರ ಬೆಳಿಗ್ಗೆ ಸಂಭವಿಸಿದೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಮೇಲನಹಳ್ಳಿಯಿಂದ ಒಂದೇ ಕುಟುಂಬದ 13 ಮಂದಿ, ಅದರಲ್ಲೂ ಮೂವರು ಮಕ್ಕಳು ಸೇರಿ ಪ್ರಯಾಣಿಸುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮೇಲನಹಳ್ಳಿ ನಿವಾಸಿ ಶೇಖರಪ್ಪ (59) ಮೃತಪಟ್ಟಿದ್ದಾರೆ. ಘಟನೆ ಬಗ್ಗೆ ಮಾಹಿತಿ ಪಡೆದ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಕಿಶೋರ್ ಪಿ ಮತ್ತು ಅವರ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.




