
ಕಾರ್ಕಳ: ಜೋಯ್ ಕ್ರಶರ್ಸ್ ಸಂಸ್ಥೆಯ ಮಾಲಕರು ಹಾಗೂ ಆತ್ಮೀಯರಾಗಿದ್ದ ಹಿರಿಯ ಉದ್ಯಮಿಗಳಾದ ಸಿ.ಎಂ. ಜೋಯ್ ಅವರ ನಿಧನಕ್ಕೆ ಕಾರ್ಕಳ ಕಾಂಗ್ರೆಸ್ ಮುಖಂಡ ಉದಯ ಶೆಟ್ಟಿ ಮುನಿಯಾಲು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಸಿ.ಎಂ. ಜೋಯ್ ಅವರ ಅಗಲಿಕೆಯಿಂದ ಸಮಾಜಕ್ಕೆ ತುಂಬಲಾರದ ನಷ್ಟ ಉಂಟಾಗಿದ್ದು, ಧಾರ್ಮಿಕ ಹಾಗೂ ಸಾಂಸ್ಕೃತಿಕ ಕ್ಷೇತ್ರಗಳಿಗೆ ಅವರು ನೀಡುತ್ತಿದ್ದ ಸಹಕಾರ ಗಣನೀಯವಾಗಿತ್ತು ಎಂದು ತಿಳಿಸಿದ್ದಾರೆ. ಉದ್ಯಮ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ ಮಾಡಿದ್ದ ಅವರು ಸಮಾಜಮುಖಿ ಕಾರ್ಯಗಳಲ್ಲಿಯೂ ಸದಾ ಸ್ಪಂದಿಸುತ್ತಿದ್ದು, ಅವರ ಸೇವಾ ಮನೋಭಾವ, ಸರಳ ವ್ಯಕ್ತಿತ್ವ ಹಾಗೂ ಸಾಮಾಜಿಕ ಬದ್ಧತೆ ಎಲ್ಲರಿಗೂ ಅನುಕರಣೀಯವಾಗಿತ್ತು ಎಂದು ಉದಯ ಶೆಟ್ಟಿ ಮುನಿಯಾಲು ತಮ್ಮ ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ. ಅಗಲಿದ ದಿವ್ಯಾತ್ಮಕ್ಕೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸುವುದಾಗಿ ತಿಳಿಸಿದ ಅವರು, ಅವರ ಕುಟುಂಬದವರು, ಬಂಧು-ಮಿತ್ರರು ಹಾಗೂ ಅಪಾರ ಅಭಿಮಾನಿ ಬಳಗಕ್ಕೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಪ್ರಾರ್ಥಿಸಿದ್ದಾರೆ.




