
ಕಾರ್ಕಳ: ತಾಲೂಕು ಕಚೇರಿಯಲ್ಲಿ ಕಂದಾಯ ನಿರೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಶಿವಪ್ರಸಾದ್ ರಾವ್ ಅವರ ನಿಧನದ ಸುದ್ದಿ ತಿಳಿದು ತೀವ್ರ ದುಃಖವಾಗಿದೆ ಎಂದು ಸಮಾಜಸೇವಕ ಉದಯ ಶೆಟ್ಟಿ ಮುನಿಯಾಲು ಸಂತಾಪ ಸೂಚಿಸಿದ್ದಾರೆ. ಕರ್ತವ್ಯನಿಷ್ಠೆ, ಕಾರ್ಯತತ್ಪರತೆ ಹಾಗೂ ಜನಸ್ನೇಹಿ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಅವರು ಮೂಲತಃ ಕಾರ್ಕಳದ ನಂದಳಿಕೆಯವರಾಗಿದ್ದು, “ಸರ್ಕಾರದ ಕೆಲಸ ದೇವರ ಕೆಲಸ” ಎಂಬ ಧ್ಯೇಯದಂತೆ ಪ್ರಾಮಾಣಿಕತೆ ಮತ್ತು ಬದ್ಧತೆಯಿಂದ ಕಾರ್ಯನಿರ್ವಹಿಸಿ ಜನಮನ್ನಣೆ ಗಳಿಸಿದ್ದರು. ಅವರ ಸರಳ ವ್ಯಕ್ತಿತ್ವ, ವೃತ್ತಿಯ ಮೇಲಿನ ಅಪಾರ ಶ್ರದ್ಧೆ ಹಾಗೂ ಸೇವಾ ಮನೋಭಾವ ಎಲ್ಲರಿಗೂ ಪ್ರೇರಣೆಯಾಗಿದ್ದು, ಅವರ ಅಗಲಿಕೆಯಿಂದ ಸರ್ಕಾರವು ಒಬ್ಬ ದಕ್ಷ ಮತ್ತು ಜನಪರ ಅಧಿಕಾರಿಯನ್ನು ಕಳೆದುಕೊಂಡಂತಾಗಿದೆ. ಪರಮಾತ್ಮನು ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ ಹಾಗೂ ಅವರ ಕುಟುಂಬದವರು, ಬಂಧು-ಮಿತ್ರರು ಮತ್ತು ಸಹೋದ್ಯೋಗಿಗಳಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಕರುಣಿಸಲಿ ಎಂದು ಉದಯ ಶೆಟ್ಟಿ ಮುನಿಯಾಲು ಪ್ರಾರ್ಥಿಸಿದ್ದಾರೆ.
ವರದಿ: ಅರುಣ್ ಭಟ್ ಕಾರ್ಕಳ




