
ಶೃಂಗೇರಿ: ಸೆಪ್ಟೆಂಬರ್ 26ರಂದು ಶೃಂಗೇರಿಯಲ್ಲಿ ವಂದೇ ಮಾತರಂ ಪಾದಯಾತ್ರೆ ನಡೆಯಲಿದೆ. ಸರಳ ಸಜ್ಜನಿಕೆಯ ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಅವರ ನೇತೃತ್ವದಲ್ಲಿ ನಡೆಯಲಿರುವ ಈ ರಾಷ್ಟ್ರೀಯತೆಯ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ದೇಶಭಕ್ತರು ಪಾಲ್ಗೊಳ್ಳುವಂತೆ ಕೇಂದ್ರದ ಜಿಲ್ಲಾ ದಿಶಾ ಸಮಿತಿ ಸದಸ್ಯ ಮಣಿಕಂಠನ್ ಕಂದಸ್ವಾಮಿ ಮನವಿ ಮಾಡಿದ್ದಾರೆ. ಸೆಪ್ಟೆಂಬರ್ 26ರ ಶನಿವಾರ ಬೆಳಿಗ್ಗೆ 9 ಗಂಟೆಗೆ ಶೃಂಗೇರಿಯ ಮಣಸೆ ವೃತ್ತದಿಂದ ಪಾದಯಾತ್ರೆ ಆರಂಭವಾಗಿ, ಶೃಂಗೇರಿ ಬಸ್ ನಿಲ್ದಾಣದವರೆಗೆ ಸಾಗಲಿದೆ. ಕಾರ್ಯಕ್ರಮದಲ್ಲಿ ಮಾಜಿ ಸಚಿವ ಡಿ.ಎನ್. ಜೀವರಾಜ್, ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ, ನಿಕಟಪೂರ್ವ ವಿಧಾನ ಪರಿಷತ್ ಉಪಸಭಾಪತಿ ಎಂ.ಕೆ. ಪ್ರಾಣೇಶ್ ಸೇರಿದಂತೆ ಹಲವು ಪ್ರಮುಖರು ಭಾಗವಹಿಸಲಿದ್ದಾರೆ ಎಂದು ಮಣಿಕಂಠನ್ ಕಂದಸ್ವಾಮಿ ತಿಳಿಸಿದ್ದಾರೆ. ವಂದೇ ಮಾತರಂ ಮೂಲಕ ರಾಷ್ಟ್ರೀಯತೆಯ ಸಂದೇಶವನ್ನು ಸಾರುವ ಈ ಕಾರ್ಯಕ್ರಮದಲ್ಲಿ ಎಲ್ಲರೂ ಒಂದಾಗಿ, ಒಗ್ಗಟ್ಟಿನಿಂದ ಪಾಲ್ಗೊಂಡು ರಾಷ್ಟ್ರೀಯತೆಯನ್ನು ಎತ್ತಿಹಿಡಿಯುವಂತೆ ಅವರು ಕರೆ ನೀಡಿದ್ದಾರೆ.




