
ಕೊಳ್ಳೇಗಾಲ: ಪರಿಸರ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿ ಎಂದು ನ್ಯಾಯಾಧೀಶರಾದ ಎಂ ಕಾವ್ಯಶ್ರೀ ಅವರು ತಿಳಿಸಿದರು. ಬಿ ಆರ್ ಟಿ ಹುಲಿ ಸಂರಕ್ಷಿತ ಪ್ರದೇಶ, ಚಾಮರಾಜನಗರ, ವನ್ಯಜೀವಿ ವಲಯ ಕೊಳ್ಳೇಗಾಲ, ಕಿತ್ತೂರ್ ರಾಣಿ ಚೆನ್ನಮ್ಮ ವಸತಿ ಶಾಲೆ, ಮುರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ತಾಲೂಕು ಕಾನೂನು ಸೇವಾ ಸಮಿತಿ ಕೊಳ್ಳೇಗಾಲ ರವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಪರಿಸರ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು. ಮುಂದಿನ ಪೀಳಿಗೆಗೆ ಪ್ರಸ್ತುತ ಪರಿಸರವನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಎಲ್ಲರ ಆದ್ಯ ಕರ್ತವ್ಯವಾಗಬೇಕು, ಪರಿಸರ ಮಾಲಿನ್ಯ, ವಾಯು ಮಾಲಿನ್ಯ, ಜಲಮಾಲಿನ್ಯ, ಮತ್ತು ಅರಣ್ಯ ವನ್ಯಜೀವಿಗಳನ್ನು ಸಂರಕ್ಷಿಸದೆ ಹೋದಲ್ಲಿ ಮುಂದಿನ ಪೀಳಿಗೆಗೆ ಅಪಾರ ನಷ್ಟ ಉಂಟಾಗುತ್ತದೆ ಹಾಗೂ ಪ್ರತಿಯೊಬ್ಬರೂ ವೈಯಕ್ತಿಕ ಜವಾಬ್ದಾರಿಯೊಂದಿಗೆ ಪರಿಸರ ಸಂರಕ್ಷಣೆಯಲ್ಲಿ ತೊಡಗಿಸಿ ಕೊಳ್ಳಬೇಕೆಂದು ಕರೆ ನೀಡಿದರು. ಶುದ್ಧ ಗಾಳಿ, ಕುಡಿಯುವ ನೀರು, ಉತ್ತಮ ಆಹಾರ ಇವುಗಳ ಬಳಕೆಯಿಂದ ಒಳ್ಳೆಯ ಆರೋಗ್ಯವನ್ನು ಹೊಂದಿ ಸಮಾಜಕ್ಕೆ ಉತ್ತಮ ಪ್ರಜೆಗಳಾಗಿ, ಮಾನವೀಯ ಮೌಲ್ಯಗಳು ಅಳವಡಿಸಿಕೊಳ್ಳಬೇಕೆಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ಜಕ್ಕಳ್ಳಿ ಆಟದ ಮೈದಾನ, ಮೊರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ಕಿತ್ತೂರಾಣಿ ಚೆನ್ನಮ್ಮ ವಸತಿ ಶಾಲೆ, ಆವರಣದಲ್ಲಿ ಒಟ್ಟು 60 ಗಿಡಗಳನ್ನು ನೆಡಲಾಯಿತು.
ಸನ್ಮಾನ. ಹಿರಿಯ ಅರಣ್ಯ ವೀಕ್ಷಕರಾದ ಮುಕುಂದ ಮತ್ತು ಗೋವಿಂದರವರನ್ನ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಟಿ.ಸಿ. ಶ್ರೀಕಾಂತ್, ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು, ಸುನೀತಾ, ಹಿರಿಯ ಸಿವಿಲ್ ನ್ಯಾಯಾಧೀಶರು, ಎಂ.ರಂಜಿತ್ ಕುಮಾರ್, ಅಪರ ಸಿವಿಲ್ ನ್ಯಾಯಾಧೀಶರು, ಮಹೇಶ್ ಕೆ ಪ್ರಾಂಶುಪಾಲರು, ವಾಸು ಬಿ ಎಸ್, ವಲಯ ಅರಣ್ಯಾಧಿಕಾರಿಗಳು ಶಾಲೆಯ ಶಿಕ್ಷಕರು ಮತ್ತು ಸಿಬ್ಬಂದಿಗಳು ಹಾಜರಿದ್ದರು.





